Home ಸುದ್ದಿಗಳು ಚಿರಸ್ತಹಳ್ಳಿ : ಅದ್ದೂರಿ ಉಡುಸಲಾಂಬಿಕ ದೇವಿ ಜಾತ್ರೆ
ಸುದ್ದಿಗಳು

ಚಿರಸ್ತಹಳ್ಳಿ : ಅದ್ದೂರಿ ಉಡುಸಲಾಂಬಿಕ ದೇವಿ ಜಾತ್ರೆ

Share
ಚಿರಸ್ತಹಳ್ಳಿ : ಅದ್ದೂರಿ ಉಡುಸಲಾಂಬಿಕ ದೇವಿ ಜಾತ್ರೆ
Share

ಹರಪನಹಳ್ಳಿ : ತಾಲ್ಲೂಕಿನ ಚಿರಸ್ತಹಳ್ಳಿ ಗ್ರಾಮದಲ್ಲಿ ಉಡುಸಲಾಂಬಿಕ ದೇವಿ ಜಾತ್ರಾ ಮಹೋತ್ಸವ ಮಂಗಳವಾರ ಸಡಗರ, ಸಂಭ್ರಮದಿಂದ ಜರುಗಿತು.

ಹಬ್ಬದ ನಿಮಿತ್ತ ಗ್ರಾಮದ ಎಲ್ಲ ದೇವಸ್ಥಾನಗಳಿಗೆ ಝಗಮಗಿಸುವ ವಿದ್ಯುತ್ ದೀಪಾಲಂಕಾರ, ದೇವಿಯ ಕಟೌಟ್‍ಗಳು ರಾರಾಜಿಸಿದವು. ಎಲ್ಲ ಪ್ರಮುಖ ರಸ್ತೆಗಳಿಗೂ ವಿದ್ಯುತ್ ದೀಪಾಲಂಕಾರ ಅಳವಡಿಸಲಾಗಿತ್ತು. ಬೆಳಿಗ್ಗೆ ಉಡುಸಲಾಂಭಿಕ ದೇವಿಗೆ ವಿಶೇಷ ಪಂಚಾಮೃತ ಅಭಿಷೇಕ ಹಾಗೂ ಉಡಿ ತುಂಬುವ ಕಾರ್ಯಕ್ರಮ ನೆರವೇರಿಸಿ, ಭಾಜ ಭಜಂತ್ರಿ, ಸಮ್ಮಾಳ, ನಂದಿಕೋಲು, ಡೊಳ್ಳು, ಹಲಗೆ, ರುಮ್ಮಿ ವಾದ್ಯಗೋಷ್ಟಿಯಲ್ಲಿ ಮೆರವಣಿಗೆ ಮೂಲಕ ದೇವಿಯನ್ನು ಅಲಂಕೃತ ಪಲ್ಲಕ್ಕಿಯಲ್ಲಿ ಹೊತ್ತು ಸಾಗಿ ಘಟ್ಟಿ ಸ್ಥಾಪಿಸಲಾಯಿತು. ಬುಧವಾರ ರಾತ್ರಿ ರಸಮಂಜರಿ, ಗುರುವಾರ ಸಂಜೆ 4ಕ್ಕೆ ಉಲುಸು ಹೊಡೆಯುವ ಕಾರ್ಯಕ್ರಮ ಜರುಗಲಿದೆ. ಶುಕ್ರವಾರ ರಾತ್ರಿ 10ಕ್ಕೆ ರಕ್ತರಾತ್ರಿ ಪೌರಾಣಿಕ ನಾಟಕ ಆಯೋಜಿಸಲಾಗಿದೆ. ದೇವಸ್ಥಾನ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.