ಪ್ರಿಯಾಂಕ ಖರ್ಗೆ ‘x’ ವಾಲ್ ನಿಂದ
ಕಲ್ಯಾಣ ಕರ್ನಾಟಕದ ಏಳಿಗೆಗೆ ಆರ್ಟಿಕಲ್ 371ಜೆ ಬಹುದೊಡ್ಡ ಕೊಡುಗೆ. ಈ ವಿಶೇಷ ಸ್ಥಾನಮಾನವು ಸಮರ್ಪಕವಾಗಿ ಅನುಷ್ಠಾನಗೊಂಡಾಗ ಮಾತ್ರ ಅದರ ಆಶಯ ಈಡೇರುತ್ತದೆ.
ನಿರಂತರ ಮೇಲ್ವಿಚಾರಣೆಯಿಂದ ಅನುಷ್ಠಾನಕ್ಕೆ ನ್ಯಾಯ ಒದಗಿಸಬಹುದು.
ನನ್ನ ಅಧ್ಯಕ್ಷತೆಯಲ್ಲಿ ನಡೆದ ಆರ್ಟಿಕಲ್ 371ಜೆ ಕುರಿತಾಗಿ
ಸರ್ಕಾರ ಹೊರಡಿಸಿದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಸಂಪುಟ ಉಪ ಸಮಿತಿಯ ಸಭೆ ನಡೆಸಲಾಯಿತು.
– 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳನ್ನು ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ಬದ್ಧತೆಯ ಕೊರತೆ ಎದ್ದು ಕಾಣುತ್ತಿದೆ, ವಿಳಂಬ ಧೋರಣೆಯನ್ನು ಬದಿಗಿರಿಸಿ ಸರ್ಕಾರದ ಆದೇಶಗಳನ್ನು ಅನುಷ್ಠಾನಕ್ಕೆ ತರಬೇಕು, ಮತ್ತು ಅಧಿಕಾರಿಗಳು ಸರ್ಕಾರದ ಆದೇಶಗಳನ್ನು ತಮಗೆ ಮನಸಿಗೆ ಬಂದಂತೆ ವ್ಯಾಖ್ಯಾನಿಸದೆ ಯಥಾವತ್ ಜಾರಿಗೆ ಕ್ರಮ ವಹಿಸಬೇಕು.
– ಮುಂಬಡ್ತಿ ನೀಡುವಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಮಿಕ್ಕುಳಿದ ವೃಂದದ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸದೇ ಒಂದೇ ಜೇಷ್ಠತಾ ಪಟ್ಟಯನ್ನು ಪ್ರಕಟಿಸಲು ಕ್ರಮ ವಹಿಸಬೇಕು.
– ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಪೈಕಿ, 5000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, 4193 ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆಯಾಗಿದ್ದಾರೆ, ಈ ಪೈಕಿ 3837 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿರುವುದರ ಬಗ್ಗೆ ಮಾಹಿತಿ ಪಡೆಯಲಾಯ್ತು.
– ವಿವಿಧ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲವು ಪ್ರಕರಣಗಳು ನ್ಯಾಯಾಲಯದ ಮುಂದಿದ್ದು, ಅಂತಹ ಪ್ರಕರಣಗಳ ಸ್ವರೂಪ, ಪ್ರಸ್ತುತ ಸ್ಥಿತಿ ಗತಿ ಕುರಿತ ಮಾಹಿತಿ ನೀಡುವುದರ ಜೊತೆಗೆ ಅವುಗಳ ಇತ್ಯರ್ಥಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತಂತೆ ಕಾಲಮಿತಿಯೊಳಗೆ ಪೂರ್ಣ ವಿವರಗಳನ್ನು ಸಂಪುಟ ಉಪ ಸಮಿತಿಗೆ ಸಲ್ಲಿಸಲು ಸೂಚಿಸಲಾಯ್ತು.
– ಸಚಿವಾಲಯದ ಅಧಿಕಾರಿ ಹಾಗೂ ನೌಕರರ ಜೇಷ್ಠತೆಯನ್ನು 2014ರ ಏಪ್ರಿಲ್ 21ರಿಂದ ಜಾರಿಗೆ ಬರುವಂತೆ ಕಾಲ್ಪನಿಕ ಜೇಷ್ಠತೆ ಪಟ್ಟಿಯನ್ನು ಸಿದ್ಧಪಡಿಸಲು ನೀಡಲಾಗಿದ್ದ ಸೂಚನೆಗೆ ಅನುಗುಣವಾಗಿ ಸಹಾಯಕ, ಹಿರಿಯ ಸಹಾಯಕ, ಶಾಖಾಧಿಕಾರಿ, ಶೀಘ್ರಲಿಪಿಗಾರರು ಹಾಗೂ ಪತ್ರಾಂಕಿತ ಆಪ್ತ ಸಹಾಯಕ ವೃಂದದ ಅಧಿಕಾರಿ/ನೌಕರರ ಜೇಷ್ಠತೆಯನ್ನು ಮರು ನಿಗದಿಪಡಿಸಲಾಗಿರುವ ಮಾಹಿತಿಯನ್ನು ಪಡೆಯಲಾಯ್ತು.
ಪ್ರಿಯಾಂಕ ಖರ್ಗೆ, ಸಚಿವರು, ಕರ್ನಾಟಕ ಸರ್ಕಾರ.
