Home ಕೃಷಿ ಹರಪನಹಳ್ಳಿ : ರಾಗಿ ಖರೀದಿ ಕೇಂದ್ರದಲ್ಲಿ ಗಲಾಟೆಗೆ ಕಾರಣವೇನು?
ಕೃಷಿಸುದ್ದಿಗಳು

ಹರಪನಹಳ್ಳಿ : ರಾಗಿ ಖರೀದಿ ಕೇಂದ್ರದಲ್ಲಿ ಗಲಾಟೆಗೆ ಕಾರಣವೇನು?

Share
ragi harapanahalli
Share

ಹರಪನಹಳ್ಳಿ : ಇಲ್ಲಿಯ ಎಪಿಎಂಸಿ ಪ್ರಾಂಗಣದಲ್ಲಿ ನಡೆಯುತ್ತಿದ್ದ ಸರ್ಕಾರದ ಬೆಂಬಲ ಬೆಲೆ ರಾಗಿ ಖರೀದಿ ಕೇಂದ್ರದ ಏಜೆನ್ಸಿಯನ್ನು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಏಪ್ರಿಲ್ 9ರಂದು ರದ್ದುಪಡಿಸಿ, ರಾಗಿ ಖರೀದಿ ಸ್ಥಗಿತಗೊಳಿಸಿದ್ದನ್ನು ಪ್ರಶ್ನಿಸಿ ರೈತರು ಶುಕ್ರವಾರ ದಿಡೀರ್ ಧರಣಿ ಸತ್ಯಾಗ್ರಹ ನಡೆಸಿದರು.

ತೂಕದಲ್ಲಿ ರೈತರಿಗೆ ಆಗುತ್ತಿರುವ ವಂಚನೆ ತಡೆಗಟ್ಟಬೇಕು, ರೈತರು ತಂದಿರುವ ಲಾರಿ, ಟ್ರಾಕ್ಟರ್‍ ಗಳಿಗೆ ಬಾಡಿಗೆ ಕೊಡಬೇಕು, ಮೇಲ್ವಿಚಾರಣೆಗೆ ಸಿಬ್ಬಂದಿ ನೇಮಿಸಬೇಕು, ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಪ್ರತಿಭಟನಾ ನಿರತ ರೈತರು ಪಟ್ಟು ಹಿಡಿದರು. ಗಲಾಟೆ ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು, ಪೊಲೀಸರು ಮದ್ಯಸ್ಥಿಕೆವಹಿಸಿ ಮನವೊಲಿಸಿದ ಬಳಿಕ, ರೈತರಿಂದ ಲಿಖಿತ ಮನವಿ ಪಡೆದ ಅಧಿಕಾರಿಗಳು ಈಗಿರುವ ಏಜೆನ್ಸಿಯೇ ಅರ್ಹರ ರಾಗಿ ಖರೀದಿಸಲು ಅವಕಾಶ ಕೊಟ್ಟರು. ಇದರಿಂದ ಸಮಧಾನಗೊಂಡ ರೈತರು ಪ್ರತಿಭಟನೆ ಹಿಂಪಡೆದರು. ಮದ್ಯಾಹ್ನ 2ಕ್ಕೆ ಆಗಮಿಸಿದ ಚಿಗಟೇರಿ ಗ್ರಾಮದ ಪಿಎಸಿಎಸ್‍ ಸಹಕಾರ ಸಂಘದ ಖರೀದಿದಾರರನ್ನು ಸ್ಥಳಕ್ಕೆ ಕರೆಯಿಸಿ ರಾಗಿ ತುಂಬಿಸಲು ಸೂಚಿಸಿದರು. ಮದ್ಯಾಹ್ನ 2 ಗಂಟೆಯಿಂದ ತೂಕ ಮಾಡುವ ಪ್ರಕ್ರಿಯೆ ಆರಂಭಗೊಂಡಿತು.

ಉಪವಿಬಾಗಾಧಿಕಾರಿ ಟಿ.ಸುರೇಶ್ ಕುಮಾರ ಮಾತನಾಡಿ, ರಾಗಿ ಖರೀದಿ ಕೇಂದ್ರಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಕಂದಾಯ ಇಲಾಖೆಯಿಂದ ಮೇಲ್ವಿಚಾರಣೆ ಅಧಿಕಾರಿ ನೇಮಿಸಲಾಗುವುದು ಎಂದು ಹೇಳಿದರು.

ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಮಾತನಾಡಿ,  ‘ತೂಕ ಮಾಡುವ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ರೈತರಿಗೆ ವಂಚನೆ ಆಗದಂತೆ  ಜಾಗೃತೆ ವಹಿಸಲಾಗುವುದು, ನೊಂದಾಯಿತ ಎಲ್ಲ ರೈತರಿಂದ ರಾಗಿ ಖರೀದಿಸಲಾಗುವುದು’ ಎಂದು ಸಿಪಿಐ ಮಹಾಂತೇಶ್ ಜಿ.ಸಜ್ಜನ್ ತಿಳಿಸಿದರು.

ದಲಿತ ಸಂಘರ್ಷ ಸಮಿತಿ ಮುಖಂಡ ಕಬ್ಬಳ್ಳಿ ಮೈಲಪ್ಪ ಮಾತನಾಡಿ, ಪ್ರಸಕ್ತ ವರ್ಷ ಹೆಚ್ಚಿನ ಇಳುವರಿ ಬಂದಿರುವ ಕಾರಣ ಹೋಬಳಿಗೊಂದು ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿದರು. ಭಾರತೀಯ ಕಿಸಾನ್ ಸಂಘಟನೆ ರಾಜ್ಯ ಸಮಿತಿ ಅಧ್ಯಕ್ಷ ಗಿರಜ್ಜಿ ನಾಗರಾಜ್ ಮಾತನಾಡಿ, ತೂಕದಲ್ಲಿ ರೈತರಿಗೆ ವಂಚನೆ ಆಗಬಾರದು. ಸರ್ಕಾರಿ ನಿಯಮ ಅನುಸಾರವೇ ರಾಗಿ ತೂಕ ಮಾಡಬೇಕು ಎಂದು ಆಗ್ರಹಿಸಿದರು. ಕೆಎಸ್‍ಎಫ್‍ಸಿ ಜಿಲ್ಲಾ ವ್ಯವಸ್ಥಾಪಕ ರಿಯಾಜ್,  ಉಪನಿರ್ದೇಶಕ ಗುರುರಾಜ್, ಪಿಎಸ್‍ಐ ಶಂಭುಲಿಂಗ ಸಿ.ಹಿರೇಮಠ, ಎಪಿಎಂಸಿ ಕಾರ್ಯದರ್ಶಿ ಶ್ರೀಕಾಂತ ಆರ್‍.ಗುಳೇದ, ಮುಖಂಡರಾದ ಪುಣಬಗಟ್ಟಿ ಮಂಜಪ್ಪ, ಬಸವರಾಜ್, ಮಂಜುನಾಥ, ದುರುಗಪ್ಪ, ನಾಗಪ್ಪ, ರುದ್ರಪ್ಪ, ಶಿವಕುಮಾರ, ರಾಜಶೇಖರ ಹಾಗೂ ರೈತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.