Home ಸುದ್ದಿಗಳು ಕುಗ್ರಾಮದ ಸಾಧಕಿ ಅರ್ಚನಾ ಹಾಗೂ ಪೋಷಕರಿಗೆ ದಲಿತ ಪರ ಸಂಘಟನೆಗಳಿಂದ ಅದ್ಧೂರಿ ಸನ್ಮಾನ
ಸುದ್ದಿಗಳು

ಕುಗ್ರಾಮದ ಸಾಧಕಿ ಅರ್ಚನಾ ಹಾಗೂ ಪೋಷಕರಿಗೆ ದಲಿತ ಪರ ಸಂಘಟನೆಗಳಿಂದ ಅದ್ಧೂರಿ ಸನ್ಮಾನ

Share
dss harapanahalli
Share

ಹರಪನಹಳ್ಳಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತಾಲ್ಲೂಕಿನ ಬಳಿಗನೂರು ಗ್ರಾಮದ ಹೆಮ್ಮೆಯ ಪ್ರತಿಭೆ ಡಿ.ಎಂ.ಅರ್ಚನಾ ಹಾಗೂ ಅವರ ಪೋಷಕರನ್ನು ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು ಶನಿವಾರ ಸನ್ಮಾನಿಸಿ ಗೌರವಿಸಿದರು.

ಡಿ.ಹನುಮಂತಪ್ಪ ಮತ್ತು ರೇಣುಕಮ್ಮ ದಂಪತಿಯ ಪುತ್ರಿಯಾದ ಅರ್ಚನಾ, ಸೌಲಭ್ಯಗಳಿಲ್ಲದ ಕುಗ್ರಾಮದಿಂದ ನಿತ್ಯ ಕೊಟ್ಟೂರಿನ ಇಂದು ಪಿಯು ಕಾಲೇಜಿಗೆ ಪ್ರಯಾಣಿಸಿ ಶಿಕ್ಷಣ ಪಡೆದಿದ್ದರು. ಅವರ ಈ ಕಠಿಣ ಪರಿಶ್ರಮ ಮತ್ತು ಐತಿಹಾಸಿಕ ಸಾಧನೆಯನ್ನು ಮೆಚ್ಚಿ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ, ದಲಿತ ಸಂಘರ್ಷ ಸಮಿತಿ (ಭೀಮವಾದ) ಹಾಗೂ ಅಂಬೇಡ್ಕರ್ ಸೇವಾ ಸಮಿತಿಯ ಮುಖಂಡರು ಅರ್ಚನಾ ಮತ್ತು ಅವರ ತಂದೆ-ತಾಯಿಯನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಬಿ.ವಸಂತ್, ಎನ್.ಸಂಜೀವಪ್ಪ, ಕೆ.ಸುಭಾಷ್, ಕೆ.ಭರತ್, ಛತ್ರಪತಿ, ಎಚ್.ಪರಶುರಾಮ್, ಜಗದೀಶ ಪೂಜಾರ, ದುರುಗೇಶ್, ಪ್ರಶಾಂತ್, ಚಂದ್ರು ಗುಂಡಗತ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.