Home ಸುದ್ದಿಗಳು  ಬ್ರೇಕಿಂಗ್ ನ್ಯೂಸ್ : ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ! 
ಸುದ್ದಿಗಳು

 ಬ್ರೇಕಿಂಗ್ ನ್ಯೂಸ್ : ವಿಜಯನಗರದಲ್ಲಿ ಭೀಕರ ಸರಣಿ ಅಪಘಾತ! 

Share
accident mariyammanahalli
Share

ವಿಜಯನಗರ: ಮರಿಯಮ್ಮನಹಳ್ಳಿ ಸಮೀಪದ ಡಣಾಪುರದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಸರಣಿ ಅಪಘಾತ ಸಂಭವಿಸಿದೆ. ಹರಿಯಾಣ ನೋಂದಣಿಯ ಲಾರಿಯೊಂದು ನಿಯಂತ್ರಣ ತಪ್ಪಿ ಕಾರು, ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಕನಿಷ್ಠ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಬೆಳ್ಳುಳ್ಳಿ ಸಾಗಿಸುತ್ತಿದ್ದ ಲಾರಿ ಅತಿ ವೇಗದಿಂದ ಬಂದು ಮೊದಲು ಕಾರಿಗೆ ಗುದ್ದಿದೆ. ಡಿಕ್ಕಿಯ ತೀವ್ರತೆಗೆ ಲಾರಿ ಕಾರಿನ ಮೇಲೆಯೇ ಉರುಳಿ ಬಿದ್ದಿದೆ. ನಂತರ ಬೈಕ್‌ಗಳಿಗೆ ಡಿಕ್ಕಿ ಹೊಡೆದು, ಹೊಸಪೇಟೆಯಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ಹಿಂಭಾಗಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಬಸ್‌ನಲ್ಲಿದ್ದ ಸುಮಾರು 25 ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕಾಮಗಾರಿಯೇ ಕಂಟಕವಾಯಿತೇ?

ಡಣಾಪುರ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆಯ ಒಂದು ಬದಿಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶವಿತ್ತು. ಈ ಗೋಜಲಿನಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿದ್ದೇ ಇಷ್ಟೊಂದು ದೊಡ್ಡ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ

ಘಟನೆಯಿಂದ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮರಿಯಮ್ಮನಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಲಾರಿ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.