Home ಸುದ್ದಿಗಳು ಬೇಸಿಗೆ ಬಿಸಿಲು : ನೀರಿನ ಅರವಟಿಗೆ ಆರಂಭ  
ಸುದ್ದಿಗಳು

ಬೇಸಿಗೆ ಬಿಸಿಲು : ನೀರಿನ ಅರವಟಿಗೆ ಆರಂಭ  

Share
harapanahalli nagarasabe
Share

ಹರಪನಹಳ್ಳಿ : ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಕಾರಣ ನಗರದ ವಿವಿಧೆಡೆ ಇಲ್ಲಿಯ ನಗರಸಭೆ ಅಧಿಕಾರಿಗಳು ಸಾರ್ವಜನಿಕರಿಗಾಗಿ ಉಚಿತ ನೀರಿನ ಅರವಟಿಗೆ ಶನಿವಾರ ಸ್ಥಾಪಿಸಿದ್ದಾರೆ.

ನಿತ್ಯ ತಾಪಮಾನ ಏರಿಕೆ ಆಗುತ್ತಿರುವ ಕಾರಣ, ಸಾರ್ವಜನಿಕರು ನೀರಿನ ದಾಹ ಪೂರೈಸಲು ಈ ಕ್ರಮ ಕೈಗೊಳ್ಳಲಾಗಿದೆ. ನಗರದ ಇಜಾರಿ ಶಿರಸಪ್ಪ ವೃತ್ತ (ಬಸ್ ನಿಲ್ದಾಣ)ದ ಬಳಿ,  ಕೊಟ್ಟೂರು ರಸ್ತೆಯ ಬಸ್ ನಿಲ್ದಾಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಬಳಿ ಆರಂಭಿಸಲಾಗಿದ್ದು, ನಗರದಲ್ಲಿ ಓಡಾಡುವ ಸಾರ್ವಜನಿಕರು ಈ ಅವಕಾಶ ಬಳಸಿಕೊಂಡು, ನೀರು ಸೇವಿಸಿ ಎಂದು ಪೌರಾಯುಕ್ತೆ ರೇಣುಕಾ ಎಸ್‍ ದೇಸಾಯಿ ಅವರು ಮಾಹಿತಿ ನೀಡಿದರು.

ನೀರಿನ ಅರವಟಿಗೆ ಸ್ಥಾಪಿಸಲು ಆಗ್ರಹಿಸಿ ಏ 16ರಂದು ಭಾರತ ಕಮ್ಯುನಿಷ್ಟ್ ಪಕ್ಷ ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿತ್ತು. ಇದು ನಾವು ಮಾಡಿದ ಹೋರಾಟದ ಪ್ರತಿಫಲ ಎಂದು ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್ ತಿಳಿಸಿದರು.  ನಗರಸಭೆ ಕಚೇರಿ ವ್ಯವಸ್ಥಾಪಕ ಅಶೋಕ ಅವರು ಹಾಗೂ ಸಿಬ್ಬಂದಿ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ...

Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.