ವಿಜಯನಗರ (ಹೊಸಪೇಟೆ): ಮೈಸೂರು ವಿಶ್ವವಿದ್ಯಾನಿಲಯದ ಸಂಯೋಜನೆಗೆ ಒಳಪಟ್ಟಿರುವ ಸಿದ್ದಾರ್ಥನಗರದ ‘ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ’ (ಕಾವಾ), 2026-27ನೇ ಸಾಲಿನ ಪ್ರಥಮ ವರ್ಷದ ಬಿ.ವಿ.ಎ (B.V.A.) ಪದವಿ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆ: ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಕೋರ್ಸ್ಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಪ್ರವೇಶ ಬಯಸುವವರು ಮೇ 30ರೊಳಗೆ ಅರ್ಜಿ ಸಲ್ಲಿಸಬೇಕು.
ವಿಶೇಷತೆ: ಈ ಪದವಿಯ 3ನೇ ಸೆಮಿಸ್ಟರ್ನಿಂದ ವಿದ್ಯಾರ್ಥಿಗಳು ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಪತ್ರಿಕೋದ್ಯಮದಲ್ಲಿ ವಿಶೇಷ ಅಧ್ಯಯನ ನಡೆಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದವರಿಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತರು https://uucms.karnataka.gov.in ಅಥವಾ https://www.cavamysore.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಅನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.
Leave a comment