Home ಸುದ್ದಿಗಳು ಸಿಂಗ್ರಿಹಳ್ಳಿ : ಸಂಭ್ರಮದ ಸೇವಾಲಾಲ್, ಮರಿಯಮ್ಮದೇವಿ ಜಾತ್ರೆ
ಸುದ್ದಿಗಳು

ಸಿಂಗ್ರಿಹಳ್ಳಿ : ಸಂಭ್ರಮದ ಸೇವಾಲಾಲ್, ಮರಿಯಮ್ಮದೇವಿ ಜಾತ್ರೆ

Share
singrihalli
Share

ಹರಪನಹಳ್ಳಿ : ಹಬ್ಬಗಳು ಪರಸ್ಪರ ಸಂಬಂಧಗಳನ್ನು ಬೆಸೆಯುವ ಕೊಂಡಿಗಳಾಗಬೇಕೇ ಹೊರತು, ದುಂದುವೆಚ್ಚದ ಆಗರವಾಗಬಾರದು ಎಂದು ಮಾಜಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಸಿಂಗ್ರಿಹಳ್ಳಿ ದೊಡ್ಡ ತಾಂಡಾದಲ್ಲಿ 14 ವರ್ಷಗಳ ನಂತರ ಆಯೋಜಿಸಲಾಗಿದ್ದ ಸಂತ ಸೇವಾಲಾಲ್ ಹಾಗೂ ಮರಿಯಮ್ಮ ದೇವಿ ಜಾತ್ರೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ಗ್ರಾಮಸ್ಥರು ಕುಡಿತದಂತಹ ದುಶ್ಚಟಗಳಿಂದ ದೂರವಿರಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಪ್ರಜ್ಞಾವಂತ ಸಮಾಜ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಜಾತ್ರೆಯ ಅಂಗವಾಗಿ ವಿವಿಧ ವಾದ್ಯಮೇಳಗಳೊಂದಿಗೆ ಶ್ರೀ ದುರ್ಗಮ್ಮ ದೇವಿ, ಶ್ರೀ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿಯ ಪಲ್ಲಕ್ಕಿ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಬಂಜಾರ ಸಮುದಾಯದ ಸಾಂಪ್ರದಾಯಿಕ ‘ವಾಜ’ (ಭಜನೆ) ಆರಾಧನೆ ಗಮನಸೆಳೆಯಿತು. ಸಮುದಾಯದ ಮಹಿಳೆಯರು ಮತ್ತು ಯುವತಿಯರು ಸಾಂಪ್ರದಾಯಿಕ ಉಡುಗೆ ತೊಟ್ಟು, ಜಾನಪದ ಹಾಡುಗಳಿಗೆ ಹೆಜ್ಜೆ ಹಾಕಿದರು. ದಾರಿಯುದ್ದಕ್ಕೂ ಭಕ್ತರು ಪಲ್ಲಕ್ಕಿಯ ಕೆಳಗೆ ಕುಳಿತು ಹರಕೆ ತೀರಿಸಿದರು.

ಚಿತ್ರದುರ್ಗ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ದೂಪದಹಳ್ಳಿ ಶಕ್ತಿಪೀಠದ ಶಿವಪ್ರಕಾಶ್ ಮಹಾರಾಜ್, ತಾಂಡಾದ ನಾಯಕರು, ಡಾವೋ, ಕಾರಭಾರಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Homeಸುದ್ದಿಗಳು

ಮಾನವನ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

ದಾವಣಗೆರೆ : ಕರ್ನಾಟಕವನ್ನು ಮಾನವ ಕಳ್ಳ ಸಾಗಾಣಿಕೆಯಿಂದ ಮುಕ್ತಗೊಳಿಸಲು ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ...

Homeಸುದ್ದಿಗಳು

ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ

ಕಲಬುರಗಿ : ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಕಡಗಂಚಿ , ಹೋಲಿ ಕ್ರಾಸ್ ಅಫಜಲಪುರ,...

Homeಸುದ್ದಿಗಳು

ನೇರ ಸಾಲ ಯೋಜನೆಗೆ ಆಹ್ವಾನ

ದಾವಣಗೆರೆ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.