Home ಶಿಕ್ಷಣ ಚಿತ್ರದುರ್ಗ: ವಿಶ್ವ ಪುಸ್ತಕ ದಿನಾಚರಣೆ 
ಶಿಕ್ಷಣ

ಚಿತ್ರದುರ್ಗ: ವಿಶ್ವ ಪುಸ್ತಕ ದಿನಾಚರಣೆ 

Share
NSS CHITRADURGA
Share

ಚಿತ್ರದುರ್ಗ: ನಗರದ ಸಮೀಪದ ದಂಡಿನ ಕುರುಬರಟ್ಟಿಯಲ್ಲಿ ಸರ್ಕಾರಿ ವಿಜ್ಞಾನ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆ ಹಾಗೂ ವಿಶೇಷ ವಾರ್ಷಿಕ ಶಿಬಿರವನ್ನು ಆಯೋಜಿಸಲಾಗಿತ್ತು.

ಉದ್ಘಾಟಿಸಿದ ಕನ್ನಡ ಉಪನ್ಯಾಸಕ ಮಹಂತೇಶ ಹೆಚ್.ಪಿ. ಅವರು, “ಬಡವರ ಶೋಷಣೆ ತಪ್ಪಿಸಲು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ, ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಿ. ಜೊತೆಗೆ ಪರಿಸರ ಸಂರಕ್ಷಣೆ ಹಾಗೂ ಮಾತೃಭಾಷೆಗೆ ಒತ್ತು ನೀಡಿ” ಎಂದು ಕರೆ ನೀಡಿದರು. ಕರ್ನಾಟಕ ಜ್ಞಾನ-ವಿಜ್ಞಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಡಾ. ಎಚ್.ಕೆ.ಎಸ್. ಸ್ವಾಮಿ ಅವರು ಚರಕದಿಂದ ನೂಲು ತೆಗೆಯುವ ಪ್ರಾತ್ಯಕ್ಷಿಕೆ ನೀಡಿ, “ವಿದ್ಯಾರ್ಥಿಗಳು ಗ್ರಾಮಗಳ ಸಮಸ್ಯೆ ಅರಿತು ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಂಶೋಧನೆ ಮಾಡಬೇಕು ಹಾಗೂ ಗಾಂಧೀಜಿಯವರ ಚರಕದಂತಹ ಸ್ವಾವಲಂಬಿ ಬದುಕಿಗೆ ಮರಳಬೇಕು” ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಡಾ. ಸತೀಶ್ ಗೌಡ ಎಸ್.ಎನ್. ಅವರು ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಯುವ ಮಹತ್ವವನ್ನು ವಿವರಿಸಿದರು.  ಮುಂಜಾನೆ ಗ್ರಾಮಸ್ಥರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು, ಹಾಗೂ ರಾತ್ರಿ ದೇಶಾಭಿಮಾನ ಮೂಡಿಸುವ ನಿಟ್ಟಿನಲ್ಲಿ ದೀಪೋತ್ಸವ ಆಚರಿಸಲಾಯಿತು. ಎನ್ಎಸ್ಎಸ್ ಅಧಿಕಾರಿಗಳಾದ ನಾಗರಾಜ್, ಸುನಿಲ್, ಡಾ. ರಾಜೇಶ್ವರಿ ಸೇರಿದಂತೆ ಹಲವು ಗಣ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಶಿಕ್ಷಣ

ಪದವಿ ಹಾಗೂ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿ...

Homeಶಿಕ್ಷಣ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನವಿದ್ಯಾರ್ಥಿಗಳಿಗೆ...

Homeಶಿಕ್ಷಣ

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ :

ದಾವಣಗೆರೆ : ಅಲ್ಪಸಂಖ್ಯಾತರ ಸಮೂದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ...

Homeಶಿಕ್ಷಣ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಕನ್ನಡ ರತ್ನ ಪ್ರಶಸ್ತಿ’ ಪ್ರದಾನ

ಹರಪನಹಳ್ಳಿ :  ತಾವು ಸಂಪಾದಿಸಿದ ಆದಾಯದಲ್ಲಿ ಸ್ವಲ್ಪ ಹಣ ಕನ್ನಡ ಸೇವೆಗಾಗಿ ಮೀಸಲಿಟ್ಟು ಕೆಲಸ ಮಾಡುತ್ತಿರುವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.