Home ಸುದ್ದಿಗಳು ಬಸವಣ್ಣನವರ ವಿಚಾರಧಾರೆಗಳು ಸಾರ್ವಕಾಲಿಕ ಪ್ರಸ್ತುತ
ಸುದ್ದಿಗಳು

ಬಸವಣ್ಣನವರ ವಿಚಾರಧಾರೆಗಳು ಸಾರ್ವಕಾಲಿಕ ಪ್ರಸ್ತುತ

Share
KUDLIGI BASAVA JAYANTI
Share

ಕೂಡ್ಲಿಗಿ:  ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಮೂಲಕ ವಿಶ್ವಕ್ಕೆ ಪ್ರಜಾಪ್ರಭುತ್ವದ ಮಾದರಿ ನೀಡಿದ ಬಸವಣ್ಣನವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹಿಟ್ನಾಳ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ   ಟಿ.ಎಚ್. ಬಸವರಾಜ ಅಭಿಪ್ರಾಯಪಟ್ಟರು.

ಪಟ್ಟಣದ ಶ್ರೀಮತಿ ಅಂಗಡಿ ವೀರಮ್ಮ, ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಜಾಗತಿಕ ಲಿಂಗಾಯತ ಮಹಾಸಭಾ ಶುಕ್ರವಾರ ಆಯೋಜಿಸಿದ್ದ ‘ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ‘ಅನುಭವ ಮಂಟಪ’ವು ವಿಶ್ವದ ಮೊದಲ ಸಂಸತ್ತು. ಇಲ್ಲಿ ಶರಣರು ವಚನಗಳ ಮೂಲಕ ಸಾಮಾಜಿಕ ಸಂಘರ್ಷಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದರು. ಜಾತಿ ಪದ್ಧತಿ, ಮೌಢ್ಯ ಹಾಗೂ ಲಿಂಗ ತಾರತಮ್ಯದ ವಿರುದ್ಧ ಸಿಡಿದೆದ್ದ ಬಸವಣ್ಣನವರು ‘ಕಾಯಕವೇ ಕೈಲಾಸ’ ಎಂಬ ತತ್ವದಡಿ ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಟಿ.ಜಿ. ಮಲ್ಲಿಕಾರ್ಜುನ ಗೌಡ ಮಾತನಾಡಿ, ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ ಅವರ ವಿಶ್ವಮಾನವ ಸಂದೇಶವನ್ನು ಎಲ್ಲೆಡೆ ಪಸರಿಸುವ ಅಗತ್ಯವಿದೆ ಎಂದರು. ವೇದಿಕೆಯಲ್ಲಿ ಪ್ರಾಚಾರ್ಯ ಷಣ್ಮುಖನ ಗೌಡ ಸಂಕಾಳ್, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಕೆ. ರವೀಂದ್ರನಾಥ್, ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್. ಬಸವರಾಜ ಮಾವಿನಹಳ್ಳಿ, ಉಪಾಧ್ಯಕ್ಷ ಎಸ್. ರಾಜೇಂದ್ರ ಪ್ರಸಾದ್, ಜಿಲ್ಲಾ ಕಾರ್ಯದರ್ಶಿ ಎನ್.ಎಂ. ರವಿಕುಮಾರ್, ಸಂಚಾಲಕ ವಿ. ಅನಿಲ್ ಕುಮಾರ್, ಸುನೀಲ್ ಗೌಡ, ಲೋಕೇಶ್ ಅವರದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಜೂ.18 ರಂದು ಪರಿಶಿಷ್ಟ ಜಾತಿ ಜನಾಂಗದವರ ಕುಂದು-ಕೊರತೆ ಆಲಿಕೆ ಸಭೆ

ಬಳ್ಳಾರಿ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ...

ಹರಪನಹಳ್ಳಿ ಪೊಲೀಸ್‌
Homeಸುದ್ದಿಗಳು

ಹರಪನಹಳ್ಳಿಯಲ್ಲಿ ಪೊಲೀಸರ ‘ಕಾಲ್ನಡಿಗೆ ಗಸ್ತು’

ಹರಪನಹಳ್ಳಿ : ನಗರದಲ್ಲಿ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕಲು ನಮ್ಮ ಪೊಲೀಸ್ ಇಲಾಖೆ ಒಂದು ಸೂಪರ್...

dc hosapete
Homeಸುದ್ದಿಗಳು

ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ – ಕವಿತಾ ಎಸ್. ಮನ್ನಿಕೇರಿ ಖಡಕ್ ಎಚ್ಚರಿಕೆ

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಕುಂಠಿತಗೊಂಡಿರುವ 7ನೇ ಸಣ್ಣ ನೀರಾವರಿ ಹಾಗೂ 2ನೇ ಜಲಮೂಲಗಳ ಗಣತಿಯನ್ನು ಸರ್ಕಾರದ...

harapanahallipdo
ಸುದ್ದಿಗಳು

ಪಂಚಾಯತ್ ಇಲಾಖೆ ನೌಕರರ ಸಂಘಕ್ಕೆ ಆಯ್ಕೆ

ಹರಪನಹಳ್ಳಿ :  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಇಲಾಖೆಯ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಹಲವಾಗಲು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.