Home ಸುದ್ದಿಗಳು ಮೈದೂರು : ರೂ.18.90 ಕೋಟಿ  ವೆಚ್ಚದ ಕಾಮಗಾರಿಗೆ ಚಾಲನೆ 
ಸುದ್ದಿಗಳು

ಮೈದೂರು : ರೂ.18.90 ಕೋಟಿ  ವೆಚ್ಚದ ಕಾಮಗಾರಿಗೆ ಚಾಲನೆ 

Share
ಮೈದೂರು ಎಂ.ಪಿ.ಲತಾ ಮಲ್ಲಿಕಾರ್ಜುನ
Share

ಹರಪನಹಳ್ಳಿ: ತಾಲ್ಲೂಕಿನ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದೊಂದಿಗೆ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ರೂ. 18.90 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಹೇಳಿದರು.

ತಾಲೂಕಿನ ಮೈದೂರು ಗ್ರಾಮದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಯೋಜನೆಯಡಿ ಅನುಮೋದನೆಗೊಂಡ 18.90 ಕೋಟಿ ರೂ. ವೆಚ್ಚದಲ್ಲಿ ವಿವಿಧ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈ ಅನುದಾನದಡಿ ಹರಪನಹಳ್ಳಿ ತಾಲೂಕಿನ ಪ್ರಮುಖ ಸಂಪರ್ಕ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಮೊದಲ ಆದ್ಯತೆ ನೀಡುತ್ತಿದೆ. ರೈತರು ಮತ್ತು ಸಾರ್ವಜನಿಕರು ಈ ಅಭಿವೃದ್ಧಿ ಕೆಲಸಗಳಿಗೆ ಸಹಕಾರ ನೀಡಬೇಕು ಎಂದರು. ಮೈದೂರು ಗ್ರಾಮಕ್ಕೆ ಮುಂಜೂರಾಗಿರುವ ಕರ್ನಾಟಕ ಪಬ್ಲಿಕ್ ಶಾಲೆ ಮತ್ತು ಪಶು ಆಸ್ಪತ್ರೆಗಳಿಗೆ ಚಾಲನೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ, ಸಹಾಯಕ ನಿರ್ದೇಶಕ ನಾಗರಾಜ್, ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಷಣ್ಮುಖಪ್ಪ, ವಕೀಲರ ಸಂಘದ ಅಧ್ಯಕ್ಷ ಟಿ.ವೆಂಕಟೇಶ್, ಪುರಸಭೆ ಮಾಜಿ ಅಧ್ಯಕ್ಷ ಡಿ.ಅಬ್ದುಲ್ ರೆಹಮಾನ್,  ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕುಬೇರಪ್ಪ, ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಮುಖಂಡರಾದ ಸಾಸ್ವಿಹಳ್ಳಿ ನಾಗರಾಜ್,  ಒ.ರಾಮಪ್ಪ, ದೇವೇಂದ್ರಗೌಡ, ಮತ್ತಿಹಳ್ಳಿ ಪಿ.ರಾಮಪ್ಪ, ಮತ್ತೂರು ಬಸವರಾಜ್, ಪ್ರಸಾದ್, ಶಿವರಾಜ್ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.