Home ಸುದ್ದಿಗಳು ಬೇಡವಾದ ಮಕ್ಕಳನ್ನು ಬೀದಿಗೆ ಬಿಡಬೇಡಿ : ವಿಜಯನಗರ ಡಿಸಿ ಕವಿತಾ ಮನ್ನಿಕೇರಿ
ಸುದ್ದಿಗಳು

ಬೇಡವಾದ ಮಕ್ಕಳನ್ನು ಬೀದಿಗೆ ಬಿಡಬೇಡಿ : ವಿಜಯನಗರ ಡಿಸಿ ಕವಿತಾ ಮನ್ನಿಕೇರಿ

Share
/vijayanagara-dc-appeal-child-adoption-hosapete/
Share

ಹೊಸಪೇಟೆ (ವಿಜಯನಗರ): “ಮಕ್ಕಳು ಈ ದೇಶದ ಅಮೂಲ್ಯ ಆಸ್ತಿ. ಪೋಷಕರಿಗೆ ಬೇಡವಾದ ಅಥವಾ ಅನಾಥವಾಗಿ ಸಿಕ್ಕ ಮಕ್ಕಳನ್ನು ಎಲ್ಲೆಂದರಲ್ಲಿ ಬಿಟ್ಟು ಅವರ ಜೀವದ ಜೊತೆ ಚೆಲ್ಲಾಟವಾಡಬೇಡಿ. ಅಂತಹ ಮಕ್ಕಳನ್ನು ಸರ್ಕಾರದ ವಿಶೇಷ ದತ್ತು ಸಂಸ್ಥೆಗೆ ಹಸ್ತಾಂತರಿಸಿ, ಅವರ ಸುಭದ್ರ ಭವಿಷ್ಯಕ್ಕೆ ದಾರಿದೀಪವಾಗಿ,” ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ನಗರದ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಇಬ್ಬರು ಮಕ್ಕಳಿಗೆ ದತ್ತು ಪೂರ್ವ ಪೋಷಕತ್ವದ ಆದೇಶ ಪತ್ರ ವಿತರಿಸಿ ಮಾತನಾಡಿದರು. ವಿಜಯನಗರ ಜಿಲ್ಲೆಯಲ್ಲಿ 2024ರ ಅಕ್ಟೋಬರ್‌ನಿಂದ ಕಾರ್ಯಾರಂಭ ಮಾಡಿರುವ ಈ ದತ್ತು ಸಂಸ್ಥೆಯು, ಈವರೆಗೆ ಒಟ್ಟು 7 ಮಕ್ಕಳಿಗೆ ಕಾನೂನಾತ್ಮಕವಾಗಿ ಪೋಷಕರನ್ನು ಹುಡುಕಿಕೊಡುವ ಮೂಲಕ ಅವರ ಬದುಕಿಗೆ ಆಸರೆಯಾಗಿದೆ. ಕಾರಾ (CARA) ಮಾರ್ಗಸೂಚಿಯಂತೆ ಮಂಡ್ಯ ಹಾಗೂ ಹೊನ್ನಾವರದ ದಂಪತಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಇಬ್ಬರು ಮಕ್ಕಳನ್ನು ದತ್ತು ಹಸ್ತಾಂತರಿಸಲಾಯಿತು.

“ಸಂಸ್ಥೆಯಲ್ಲಿರುವ ಮಕ್ಕಳ ಪಾಲನೆ ಮತ್ತು ಪೋಷಣೆಯನ್ನು ಸಿಬ್ಬಂದಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಎಲ್ಲಾದರೂ ಅನಾಥ ಅಥವಾ ಪರಿತ್ಯಕ್ತ ಮಕ್ಕಳು ಕಂಡುಬಂದಲ್ಲಿ ಕೂಡಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕವನ್ನು ಸಂಪರ್ಕಿಸಿ. ಕಾನೂನುಬದ್ಧವಾಗಿ ಮಕ್ಕಳನ್ನು ದತ್ತು ಪಡೆಯುವ ಮೂಲಕ ಅವರಿಗೆ ಸುಂದರ ಬದುಕು ನೀಡಿ,” ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಧೀಪ್ ಕುಮಾರ್ ಉಂಕಿ, ದತ್ತು ಕೇಂದ್ರದ ಸಿಬ್ಬಂದಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeರಾಜಕೀಯಸುದ್ದಿಗಳು

ಅಡವಿಹಳ್ಳಿಯಲ್ಲಿ ಬಸವೇಶ್ವರ ದೇವಸ್ಥಾನದ ಕಳಸಾರೋಹಣ

ಹರಪನಹಳ್ಳಿ: ಮೊಬೈಲ್ಗೆ ಹೇಗೆ ನೆಟ್ವರ್ಕ್ ಟವರ್ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ, ದೇವಸ್ಥಾನಗಳು...

Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ...

ssm dvg
ಸುದ್ದಿಗಳು

ಶಾಮನೂರು ಶಿವಶಂಕರಪ್ಪ ಜನ್ಮದಿನ: ಜೂನ್‌ 17ಕ್ಕೆ  ಉಚಿತ ಸಾಮೂಹಿಕ ವಿವಾಹ  

ಹರಪನಹಳ್ಳಿ : ಮಾಜಿ ಶಾಸಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಜೂನ್...

vijaya vikrama
Homeಸುದ್ದಿಗಳು

ದೇಶದ ಬದಲಾವಣೆಯಲ್ಲಿ ಪತ್ರಕರ್ತರ ಪಾತ್ರ ದೊಡ್ಡದು : ಕೋಡಿಹಳ್ಳಿ ಭೀಮಪ್ಪ

ಹರಪನಹಳ್ಳಿ : ಪತ್ರಿಕೋದ್ಯಮದಲ್ಲಿ ನಿಷ್ಠೆ, ಧೈರ್ಯ ಮತ್ತು ಪ್ರಾಮಾಣಿಕತೆ ಇದ್ದರೆ ಸಮಾಜದ ದಿಕ್ಕು ಬದಲಾಯಿಸಲು ಸಾಧ್ಯವಾಗುತ್ತದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.