Home ಸುದ್ದಿಗಳು ‘ಉದ್ಯೋಗ ಖಾತ್ರಿ’ ಉಳಿಸಲು ಸಿಪಿಐ(ಎಂಎಲ್) ಆಗ್ರಹ
ಸುದ್ದಿಗಳು

‘ಉದ್ಯೋಗ ಖಾತ್ರಿ’ ಉಳಿಸಲು ಸಿಪಿಐ(ಎಂಎಲ್) ಆಗ್ರಹ

Share
cpiml
Share

ಹರಪನಹಳ್ಳಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಲಹೀನಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಮಸೂದೆ ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸಿಪಿಐ(ಎಂಎಲ್) ಲಿಬರೇಷನ್ ಹಾಗೂ ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

ನಗರದ ತಾಲ್ಲೂಕು ಆಡಳಿತ ಸೌಧದಲ್ಲಿ ಜಮಾಯಿಸಿದ ಕಾರ್ಮಿಕರು ಹಾಗೂ ಸಂಘಟನೆಯ ಮುಖಂಡರು, ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.  ಸಿಪಿಐ(ಎಂಎಲ್) ಲಿಬರೇಷನ್ ರಾಜ್ಯ ಕಾರ್ಯದರ್ಶಿ ಎಸ್. ಪರಶುರಾಮ ಮಾತನಾಡಿ,    ಕೇಂದ್ರ ಸರ್ಕಾರವು ಬಡವರಿಗೆ ಆಸರೆಯಾಗಿದ್ದ ಉದ್ಯೋಗ ಖಾತ್ರಿ ಯೋಜನೆಯನ್ನು ಬದಲಾಯಿಸಿ, ಹೊಸದಾಗಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ – 2025  ಜಾರಿಗೆ ತಂದಿದೆ. ಡಿಸೆಂಬರ್‌ನಲ್ಲಿ ಸಂಸತ್ತಿನಲ್ಲಿ ಅಂಗೀಕಾರವಾಗಿರುವ ಈ ಮಸೂದೆಯು ದೇಶದ ಬಡ ಮತ್ತು ಮಧ್ಯಮ ವರ್ಗದವರ ಉದ್ಯೋಗದ ಹಕ್ಕನ್ನು ಕಸಿದುಕೊಂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮಹಾತ್ಮ ಗಾಂಧೀಜಿಯವರ ಹೆಸರನ್ನು ಕೈಬಿಟ್ಟಿರುವುದು ಖಂಡನೀಯ. ಕೂಡಲೇ ಹಳೆಯ ಹೆಸರಿನಲ್ಲಿಯೇ ಯೋಜನೆ ಯಥಾವತ್ತಾಗಿ ಮುಂದುವರಿಸಬೇಕು. 2025-26ನೇ ಸಾಲಿನಲ್ಲಿ ಈ ಯೋಜನೆಗೆ ರೂ. 86,000 ಕೋಟಿ ಮೀಸಲಿಡಲಾಗಿತ್ತು. ಮುಂಬರುವ 2026-27ನೇ ಸಾಲಿನ ಬಜೆಟ್‌ನಲ್ಲಿ ಈ ಮೊತ್ತವನ್ನು ಕನಿಷ್ಠ ರೂ. 2 ಲಕ್ಷ ಕೋಟಿಗೆ ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ಹುಲಿಕಟ್ಟಿ ಮೈಲಪ್ಪ, ತಾಲ್ಲೂಕು ಕಾರ್ಯದರ್ಶಿ ಮಂಗಳಮ್ಮ, ಮುಖಂಡರಾದ ಸಂದೇರ ಪರಶುರಾಮ, ನಾರಾಯಣಪುರ ಅಂಜಿನಮ್ಮ,  ಸುಧಾ, ರಫಿ, ಮೋಹನ್ ಕುಮಾರ, ಅಂಜಿನಮ್ಮ, ತಿಲಕ್ ಕುಮಾರ, ಪ್ರವೀಣ್ ಸವಿತಾ ಯಶೋದಮ್ಮ, ಗೀತಮ್ಮ, ಈರಮ್ಮ, ರೇಣುಕಮ್ಮ,  ಹನುಮಕ್ಕ,  ಸಣ್ಣ ಕರಿಬಸಪ್ಪ,  ಶೇಖಮ್ಮ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.