Home ಆರೋಗ್ಯವಂತ ಸಿಬ್ಬಂದಿಯಿಂದ ದಕ್ಷ ಆಡಳಿತ ಸಾಧ್ಯ: ಡಿಸಿ ಕವಿತಾ ಮನ್ನಿಕೇರಿ
Homeಆರೋಗ್ಯ

ಆರೋಗ್ಯವಂತ ಸಿಬ್ಬಂದಿಯಿಂದ ದಕ್ಷ ಆಡಳಿತ ಸಾಧ್ಯ: ಡಿಸಿ ಕವಿತಾ ಮನ್ನಿಕೇರಿ

Share
dc hosapete
Share

ಹೊಸಪೇಟೆ: ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಂಡಾಗ ಮಾತ್ರ ದಕ್ಷ ಸೇವೆ ನೀಡಲು ಸಾಧ್ಯ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ‘ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಒತ್ತಡದ ಕೆಲಸದ ನಡುವೆ ನೌಕರರು ಆರೋಗ್ಯ ನಿರ್ಲಕ್ಷಿಸದೆ, ಮುಂಜಾಗ್ರತೆಯಾಗಿ ವರ್ಷಕ್ಕೊಮ್ಮೆಯಾದರೂ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಶಿಬಿರದಲ್ಲಿ ಡಿಸಿ ಕವಿತಾ ಮನ್ನಿಕೇರಿ ಹಾಗೂ ಜಿ.ಪಂ. ಸಿಇಒ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ಸ್ವತಃ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಸಿಬ್ಬಂದಿಗೆ ಉಚಿತವಾಗಿ ಔಷಧಿಗಳನ್ನು ವಿತರಿಸಲಾಯಿತು.

ವಿ

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.