Home ಕೂಲಹಳ್ಳಿ : ಆರ್ಥಿಕ ಭದ್ರತೆಗೆ ಡಿಜಿಟಲ್ ಸಾಕ್ಷರತೆ ಅಗತ್ಯ
Homeಸುದ್ದಿಗಳು

ಕೂಲಹಳ್ಳಿ : ಆರ್ಥಿಕ ಭದ್ರತೆಗೆ ಡಿಜಿಟಲ್ ಸಾಕ್ಷರತೆ ಅಗತ್ಯ

Share
small finance
Share

ಹರಪನಹಳ್ಳಿ   : ಗ್ರಾಮೀಣ ಭಾಗದ ಜನರು ಆರ್ಥಿಕವಾಗಿ ಸದೃಢರಾಗಲು ಹಣಕಾಸಿನ ಶಿಸ್ತು ಹಾಗೂ ಡಿಜಿಟಲ್ ಸಾಕ್ಷರತೆ ಅತ್ಯಗತ್ಯ ಎಂದು ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್  ಸಿಎಸ್ಆರ್ ವಿಭಾಗದ ಅಧಿಕಾರಿ ಪರಮೇಶ್ ತಿಳಿಸಿದರು.

ತಾಲ್ಲೂಕಿನ ಕೂಲಹಳ್ಳಿ ಗ್ರಾಮದಲ್ಲಿ ಬ್ಯಾಂಕ್‌ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ ವತಿಯಿಂದ ಆಯೋಜಿಸಲಾಗಿದ್ದ ಆರ್ಥಿಕ ಮತ್ತು ಡಿಜಿಟಲ್ ಸಾಕ್ಷರತೆ ಕುರಿತ ಜಾಗೃತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಪ್ರತಿಯೊಬ್ಬರೂ ತಮ್ಮ ಆದಾಯ, ಖರ್ಚು ಮತ್ತು ಉಳಿತಾಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು. ಜನರು ತಮ್ಮ ದೈನಂದಿನ ಆದಾಯ ಮತ್ತು ಖರ್ಚುಗಳ ದಿನಚರಿಯನ್ನು ನಿಯಮಿತವಾಗಿ ದಾಖಲಿಸಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಅನಗತ್ಯ ವೆಚ್ಚ ತಡೆಯಲು ಸಾಧ್ಯವಾಗುತ್ತದೆ ಎಂದರು.

ಪ್ರಧಾನಮಂತ್ರಿ ಜನಧನ್ ಯೋಜನೆ, ಸುಕನ್ಯಾ ಸಮೃದ್ದಿ, ಮುದ್ರಾ ಯೋಜನೆ, ಅಟಲ್‌ ಪಿಂಚಣಿ ಯೋಜನೆ, ಸುರಕ್ಞಾ ವಿಮೆ, ಅಂಚೆ ಕಚೇರಿ ಉಳಿತಾಯಗಳ ಬಗ್ಗೆ ಮಾಹಿತಿ ನೀಡಿದರು.ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಸಿಬ್ಬಂದಿ ವರ್ಗ ಹಾಗೂ ಕೂಲಹಳ್ಳಿ ಗ್ರಾಮದ ಮಹಿಳೆಯರು ಪಾಲ್ಗೊಂಡಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ -2026″ಶಿಕ್ಷಕ ಸೇವಾ ರತ್ನ”ಪ್ರಶಸ್ತಿ ಪ್ರಧಾನ.

ಹರಪನಹಳ್ಳಿ: ತಾಲೂಕಿನ ಅರಸನಾಳು ಗ್ರಾಮದ ಹೆಚ್.ಶಿವಾನಂದ ಅವರು ಹರಪನಹಳ್ಳಿ ನಗರದ ಶ್ರೀ ತರಳಬಾಳು ಜಗದ್ಗುರು ವಿದ್ಯಾ...

Homeಸುದ್ದಿಗಳು

ಜೆಸಿಐ ಅಲ್ಯುಮ್ನಿ ಕ್ಲಬ್‌ನಿಂದ ‘ನಮಸ್ತೆ ಭಾರತ 2.0’: ಆಸ್ಪತ್ರೆ ಸಿಬ್ಬಂದಿಗೆ ತರಬೇತಿ

ಹರಪನಹಳ್ಳಿ : ನಗರದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಜೆಸಿಐ ಅಲ್ಯುಮ್ನಿ ಕ್ಲಬ್ ವತಿಯಿಂದ ಮಂಗಳವಾರ ಜೆಎಸಿ...

Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.