Home ಸುದ್ದಿಗಳು ಹರಪನಹಳ್ಳಿಯಲ್ಲಿ ಔಷಧಿ ಅಂಗಡಿಗಳು ಬಂದ್ ಮಾಡಿ ಮುಷ್ಕರ
ಸುದ್ದಿಗಳು

ಹರಪನಹಳ್ಳಿಯಲ್ಲಿ ಔಷಧಿ ಅಂಗಡಿಗಳು ಬಂದ್ ಮಾಡಿ ಮುಷ್ಕರ

Share
medical shop harapanahalli
Share

ಹರಪನಹಳ್ಳಿ: ಅನ್‍ಲೈನ್‌ನಲ್ಲಿ ನಿಯಮ ಬಾಹಿರವಾಗಿ ಔಷಧಿ ಮಾರಾಟ ಮಾಡುತ್ತಿರುವ ಇ-ಫಾರ್ಮಸಿ ಜಾಲದ ವಿರುದ್ಧ ದೇಶಾದ್ಯಂತ ಕರೆ ನೀಡಿರುವ ಔಷಧಿ ವ್ಯಾಪಾರ ಬಂದ್  ಬೆಂಬಲಿಸಿ ಹರಪನಹಳ್ಳಿ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘ ಬುಧವಾರ ಔಷಧ ಅಂಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿತು.

ಅಖಿಲ ಭಾರತ ಕೆಮಿಸ್ಟ್ ಮತ್ತು ಡ್ರಗ್ಗಿಸ್ಟ್ ಅಸೋಸಿಯೇಷನ್ ಕರೆ ನೀಡಿದ್ದ ದೇಶಾದ್ಯಂತ ಔಷಧಿ ವ್ಯಾಪಾರ ಬಂದ್ ಹೋರಾಟಕ್ಕೆ ತಾಲ್ಲೂಕು ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ಸಂಪೂರ್ಣ ಬೆಂಬಲ ಸೂಚಿಸಿದ ಔಷಧ ವ್ಯಾಪಾರಸ್ಥರು ತಾಲ್ಲೂಕು ಆಡಳಿತ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ತೆರಳಿ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ತಾಲ್ಲೂಕು ಅಧ್ಯಕ್ಷ ಎಸ್‍.ಎಚ್‍.ಎಂ.ರಾಜಶೇಖರಸ್ವಾಮಿ, ಆನ್‌ಲೈನ್‌ನಲ್ಲಿ ಕೇವಲ ಪ್ರಿಸ್ಕ್ರಿಪ್ಷನ್ ಫೋಟೋ ಕಳುಹಿಸಿ ಯಾವುದೇ ಕಟ್ಟುನಿಟ್ಟಿನ ಪರಿಶೀಲನೆ ಇಲ್ಲದೆ ಔಷಧಿಗಳನ್ನು ಮನೆಗೆ ತರಿಸಿಕೊಳ್ಳುತ್ತಾರೆ. ಇ-ಫಾರ್ಮಸಿ ವ್ಯವಹಾರಗಳು ದೇಶಾದ್ಯಂತ ಲಕ್ಷಾಂತರ ಸಾಂಪ್ರದಾಯಿಕ ಔಷಧಿ ವ್ಯಾಪಾರಿಗಳ ಹೊಟ್ಟೆಯ ಮೇಲೆ ಹೊಡೆಯುತ್ತಿವೆ. ಆನ್‌ಲೈನ್ ಔಷಧಿ ಮಾರಾಟಕ್ಕೆ ನೀಡಿರುವ ಅವಕಾಶವನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕು. ದೇಶದ ಲಕ್ಷಾಂತರ ಸಾಂಪ್ರದಾಯಿಕ ಔಷಧಿ ವ್ಯಾಪಾರಿಗಳ ಹಿತರಕ್ಷಣೆ ಮಾಡಬೇಕು ಎಂದು ಆಗ್ರಹಸಿದರು.

ಔಷಧ ವ್ಯಾಪಾರಿಗಳಾದ ಬಿ.ಎಸ್.ರವಿಶಂಕರ, ಟಿ.ಎಂ.ರುದ್ರಮುನಿ, ಎಚ್.ಎಂ.ಗುರುಬಸವರಾಜ, ಎ.ಅಮಿತ್ ಕುಮಾರ, ಎಂ.ವೀರೇಶ, ಬಿ.ಚಮನ್ ವಲಿ, ಶಿವಾಜಿ, ಬಿ.ಎಂ.ವೃಷಬೇಂದ್ರಪ್ಪ, ಶಂಭುಲಿಂಗಯ್ಯ, ವೀರೇಶ್, ಯೋಗೇಶ್ವರಗೌಡ, ಶ್ರೀಕಾಂತ ಯಾದವ್, ಅಜಿತ್, ಗುರುರಾಜ, ಸಂತೋಷ, ಪ್ರದೀಪ ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.