Home ಕಾರ್ಮಿಕರ ಕನಿಷ್ಠ ವೇತನ ₹42 ಸಾವಿರಕ್ಕೆ ಏರಿಕೆಗೆ ಆಗ್ರಹ
Homeಸುದ್ದಿಗಳು

ಕಾರ್ಮಿಕರ ಕನಿಷ್ಠ ವೇತನ ₹42 ಸಾವಿರಕ್ಕೆ ಏರಿಕೆಗೆ ಆಗ್ರಹ

Share
Share

ಬೆಂಗಳೂರು: ರಾಜ್ಯ ಸರ್ಕಾರವು ಗಾರ್ಮೆಂಟ್ಸ್, ಮನೆಗೆಲಸ ಹಾಗೂ ನೈರ್ಮಲ್ಯ ಕಾರ್ಮಿಕರು ಸೇರಿದಂತೆ ವಿವಿಧ ಅಸಂಘಟಿತ ವಲಯದ ಕಾರ್ಮಿಕರ ಕನಿಷ್ಠ ವೇತನವನ್ನು ಪರಿಷ್ಕರಿಸಿರುವುದನ್ನು ‘ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್’ (ಎಐಸಿಸಿಟಿಯು) ಸ್ವಾಗತಿಸಿದೆ. ಆದರೆ, ಪ್ರಸ್ತುತ ಮಾರುಕಟ್ಟೆಯ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನವನ್ನು ತಿಂಗಳಿಗೆ ₹42,000 ಕ್ಕೆ ನಿಗದಿಪಡಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಸರ್ಕಾರದ ಹೊಸ ಪರಿಷ್ಕರಣೆಯ ಅನ್ವಯ ರಾಜ್ಯದಲ್ಲಿ ಕಾರ್ಮಿಕರ ಕನಿಷ್ಠ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:

  • ವಲಯ 1: ₹23,376.43 ರಿಂದ ₹31,114.02 ರವರೆಗೆ.
  • ವಲಯ 2: ₹21,251.30 ರಿಂದ ₹28,285.47 ರವರೆಗೆ.
  • ವಲಯ 3: ₹19,319.36 ರಿಂದ ₹25,714.07 ರವರೆಗೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಎಐಸಿಸಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್, ‘ಸರ್ಕಾರದ ಈ ವೇತನ ಪರಿಷ್ಕರಣೆ ಕ್ರಮವು ಸ್ವಾಗತಾರ್ಹ. ಆದರೆ, ಪ್ರಸ್ತುತ ದಿನಮಾನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಿತಿಮೀರಿದ್ದು, ಶ್ರಮಿಕ ವರ್ಗದ ಜೀವನ ನಿರ್ವಹಣಾ ವೆಚ್ಚ ದುಬಾರಿಯಾಗಿದೆ. ಹೀಗಾಗಿ ಮಾಸಿಕ ₹42 ಸಾವಿರ ಕನಿಷ್ಠ ವೇತನ ನೀಡುವತ್ತ ಸರ್ಕಾರ ಗಂಭೀರವಾಗಿ ಚಿಂತಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಪರಿಷ್ಕೃತ ವೇತನವು ಕೇವಲ ಆದೇಶಕ್ಕೆ ಸೀಮಿತವಾಗದೆ, ಎಲ್ಲಾ ವಲಯಗಳಲ್ಲಿ ಕಾರ್ಮಿಕರಿಗೆ ಕಟ್ಟುನಿಟ್ಟಾಗಿ ತಲುಪುವಂತೆ ಸಂಬಂಧಪಟ್ಟ ಅಧಿಕಾರಿಗಳು ನಿಗಾ ವಹಿಸಬೇಕು. ಯಾವುದೇ ಕಾರಣಕ್ಕೂ ಕಾರ್ಮಿಕರ ಶೋಷಣೆಯಾಗದಂತೆ ಎಚ್ಚರವಹಿಸಬೇಕು’ ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.