Home ದೇವಸ್ಥಾನಗಳು ಸೌಹಾರ್ದತೆ ಬೆಳೆಸುವ ಶಕ್ತಿಕೇಂದ್ರಗಳು : ಉಜ್ಜಯಿನಿ ಜಗದ್ಗುರು
Home

ದೇವಸ್ಥಾನಗಳು ಸೌಹಾರ್ದತೆ ಬೆಳೆಸುವ ಶಕ್ತಿಕೇಂದ್ರಗಳು : ಉಜ್ಜಯಿನಿ ಜಗದ್ಗುರು

Share
ADAVIHALLI
Share

ಹರಪನಹಳ್ಳಿ : ಮೊಬೈಲ್‌ಗೆ ನೆಟ್‌ವರ್ಕ್ ಟವರ್‌ ಹೇಗೆ ಮುಖ್ಯವೋ, ಹಾಗೆಯೇ ದೇವಸ್ಥಾನದ ಗೋಪುರಕ್ಕೆ ಕಳಸ ಬಹುಮುಖ್ಯ. ದೇವಸ್ಥಾನಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬೆಳೆಸುವ ಶಕ್ತಿಕೇಂದ್ರಗಳಾಗಿವೆ” ಎಂದು ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಬಣ್ಣಿಸಿದರು.

ತಾಲ್ಲೂಕಿನ ಅಡವಿಹಳ್ಳಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಜ್ಜಯಿನಿ ಪೀಠದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ, ಬಸವೇಶ್ವರ ದೇವಸ್ಥಾನದ ನೂತನ ಗೋಪುರದ ಕಳಸಾರೋಹಣ ಹಾಗೂ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಗೋಪುರದ ಮೇಲಿರುವ ಕಳಸವು ದೇವಸ್ಥಾನದ ಪವಿತ್ರ ಶಕ್ತಿಯ ಸಂಕೇತವಾಗಿದೆ. ಭಗವಂತನ ದಿವ್ಯಶಕ್ತಿಯು ಈ ಕಳಸದ ಮೂಲಕ ಇಡೀ ಊರಿಗೆ ಹರಡುತ್ತದೆ ಹಾಗೂ ಪ್ರಕೃತಿಯಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಗ್ರಾಮಸ್ಥರು ಪ್ರತಿದಿನ ದೇವರ ಸ್ಮರಣೆ ಮಾಡಬೇಕು. ಭಗವಂತನನ್ನು ಅರಿತಾಗ ಮಾತ್ರ ಅರಿವಿನ ನಿಜವಾದ ಜ್ಞಾನ ಉಂಟಾಗುತ್ತದೆ” ಎಂದು ಶ್ರೀಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ತೆಗ್ಗಿನಮಠ ಸಂಸ್ಥಾನದ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಮತ್ತು ಅಡವಿಹಳ್ಳಿಯ ಸದ್ಗುರು ಶಿವಯೋಗಿ ವೀರ ಗಂಗಾಧರ ಹಾಲಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ, ರಾಜ್ಯ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಜಿ.ನಂಜನಗೌಡ.  ಅಧ್ಯಕ್ಷ ಎ.ಜೆ.ಮಂಜುನಾಥ ಗೌಡ, ಉಪಾಧ್ಯಕ್ಷ ಹಾವನೂರು ಹಾಲಪ್ಪ, ಪ್ರಧಾನ ಕಾರ್ಯದರ್ಶಿ ಗುಬ್ಬವ್ವರ ಪೂಜಾರ್ ಬಸವರಾಜ, ಖಜಾಂಚಿ ಬಿ.ಜಿ.ಶರಣಪ್ಪ, ಸಹ ಕಾರ್ಯದರ್ಶಿ ನಿಂಬಳಗೇರಿ ಬಸವರಾಜ,  ಮಲ್ಲಿಕಾರ್ಜುನ ಕಲ್ಮಠ, ಕರಿಬಸವರಾಜ, ಓಂಕಾರಗೌಡ, ಸುರೇಶ, ಪಿ.ಅರುಣ್ ಕುಮಾರ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
kannada
Homeಕ್ರೀಡೆ

ಹರಪನಹಳ್ಳಿಯಲ್ಲಿ ಗಮನ ಸೆಳೆದ ಬೀಳ್ಕೊಡುಗೆ

ಹರಪನಹಳ್ಳಿ : ಕ್ರೀಡೆ ಮತ್ತು ಇತರ ದೈಹಿಕ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು...

nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ...

darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು...

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!
Homeರಾಜಕೀಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಶನಿವಾರ ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸದಾ ಕುತೂಹಲ ಮೂಡಿಸುತ್ತಿದ್ದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.