Home ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ
Homeಸುದ್ದಿಗಳು

ಕೋಟೆ ಅಂಜನೇಯ ದೇವಸ್ಥಾನ ಜಾಗ ಒತ್ತುವರಿ ತೆರವುಗೊಳಿಸದಿದ್ದರೆ ಹೋರಾಟದ ಎಚ್ಚರಿಕೆ

Share
Share

ಹರಪನಹಳ್ಳಿ (ವಿಜಯನಗರ ಜಿಲ್ಲೆ ) : ಪಾಳೆಗಾರ ರಾಜಸೋಮಶೇಖರ ನಾಯಕರ ಕಾಲದ ನಿರ್ಮಾಣವಾದ ಕೋಟೆ ಅಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮುಜರಾಯಿ ಇಲಾಖೆ ಆಡಳಿತಾಧಿಕಾರಿ ನೇಮಿಸಲು ದೇವಸ್ಥಾನ ಸಮಿತಿ ಅವಕಾಶ ಕೊಡುವುದಿಲ್ಲ ಎಂದು ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ‌ ಎಚ್.ಕೆ. ಹಾಲೇಶ ತಿಳಿಸಿದರು.

ನಗರದ ಕೋಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನಕ್ಕೆ ಲಕ್ಷಾಂತರ ರೂಪಾಯಿ ಆದಾಯವಿಲ್ಲ, ಆಸ್ತಿಯಿಲ್ಲ. ಸಮಿತಿಗೆ ಸರ್ಕಾರದ ಅನುದಾನವಿಲ್ಲ, ಭಕ್ತರಿಂದ ಸಂಗ್ರಹಿಸುವ ಸಾವಿರಾರು ರೂಪಾಯಿ ದೇಣಿಗೆಯಲ್ಲಿಯೇ ಸಮಿತಿ ಅಭಿವೃದ್ಧಿ ಪಡಿಸುತ್ತಿದೆ. ಇಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ‌ ನಿರಾಧಾರ ಎಂದರು.

ದಿವಂಗತ ಪಿರಂಗಿ ದುರ್ಗದಯ್ಯ ಅಧ್ಯಕ್ಷರಾಗಿದ್ದ ಸರ್ಕಾರಿ ಭೂಗಳ್ಳರ ವಿರೋಧಿ ಸಮಿತಿಯ ಹೋರಾಟದ ಫಲವಾಗಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಜಾಗ ಉಳಿದಿದೆ ಎಂದರು.

ಹಿಂದೆ ಒಟ್ಟು 186 ಎಕರೆ ಕೆರೆ ಪರಂಪೋಕಿತ್ತು. 1962ರಲ್ಲಿ 68.66 ಎಕರೆ ಪಟ್ಟಾ ವಿತರಿಸಲಾಗಿದೆ. ಕೋಟೆ ಆಂಜನೇಯ ದೇವಸ್ಥಾನಕ್ಕೆ 6.8 ಎಕರೆ, ಕೋಟೆ ಕಾಳಮ್ಮ ದೇವಸ್ಥಾನಕ್ಕೆ 6.58, ಜೈನ ಬಸದಿಗೆ 2.70 ಎಕರೆ, ಎಡಿಬಿ ಕಾಲೇಜಿಗೆ 6 ಎಕರೆ, ಸೊಸೈಟಿಗೆ 6 ಎಕರೆ ನಿಗಧಿಪಡಿಸಿ ಇದೇ ತಹಶೀಲ್ದಾರರು ಹಂಚಿಕೆ ಮಾಡಿ ಆದೇಶಿಸಿದ್ದಾರೆ.

ಈ ಜಾಗದಲ್ಲಿ ಆಗಿರುವ ಒತ್ತುವರಿ ಕಣ್ಣಿಗೆ ಕಾಣುತ್ತಿದೆ, ಆದರೆ ಇಲ್ಲಿಯ ತಹಶೀಲ್ದಾರ ಅವರೂ ದೇವಸ್ಥಾನ ಜಾಗ ‌ಒತ್ತುವರಿ ಆಗಿಲ್ಲ ಎಂದು ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೆ ಒತ್ತುವರಿದಾರರ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದರೂ, ಕ್ರಮವಹಿಸಲು ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ದ ಹೋರಾಟ ನಿಲ್ಲಿಸಲ್ಲ ಎಂದು ಎಚ್ಚರಿಕೆ ನೀಡಿದರು.

ಕೋಟ್ಯಂತರ ರೂಪಾಯಿ ಆದಾಯವಿರುವ ಚಿಗಟೇರಿ ನಾರದಮುನಿ ಸೇರಿ ವಿವಿಧ ದೇವಸ್ಥಾನಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ, ಆದರೆ ಕೋಟೆ ಆಂಜನೇಯ ದೇವಸ್ಥಾನಕ್ಕೆ ಆಡಳಿತಾಧಿಕಾರಿ ನೇಮಿಸುವ ಹಿಂದಿನ ಹುನ್ನಾರವೇನು ಎಂದು‌ ಪ್ರಶ್ನಿಸಿದರು.

ಇಲಾಖೆ ವ್ಯಾಪ್ತಿಗೆ ಸೇರಿರುವ ಉಚ್ಚಂಗಿದುರ್ಗದ ಉಚ್ಚೆಂಗೆಮ್ಮ, ದೇವರ ತಿಮ್ಲಾಲಪುರದ ಲಕ್ಷ್ಮೀ ವೆಂಕಟೇಶ್ವರ, ಕೂಲಹಳ್ಳಿಯ ಗೋಣಿಬಸವೇಶ್ವರ ಸೇರಿ 54 ದೇವಾಲಯಗಳು ಮುಜುರಾಯಿಗೆ ಒಳಪಟ್ಟಿವೆ. ಆ ದೇವಸ್ಥಾನಗಳು ಇಂದಿಗೂ ಅಭಿವೃದ್ಧಿ ಕಾಣದೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ ಎಂದು ದೂರಿದರು. ಮುಖಂಡರಾದ ಗುಡಿಹಳ್ಳಿ ಹಾಲೇಶ ಹಾಗೂ ಎಚ್. ವೆಂಕಟೇಶ್ ಮಾತನಾಡಿ, ಭಕ್ತರ ಭಾವನೆಗಳಿಗೆ ದಕ್ಕೆ ತರುವ ರೀತಿಯಲ್ಲಿ ಅಧಿಕಾರಿಗಳು ವರ್ತಿಸದೇ, ದೇವಸ್ಥಾನ ಸಮಿತಿಗೆ ಸಹಕಾರ‌ ನೀಡಬೇಕು ಎಂದರು.

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಸಂಚಾಲಕ ಎಚ್.ಎಂ. ಜಗದೀಶ್ ಮಾತನಾಡಿ, ಈಗಿರುವ ಸಮಿತಿ ದೇವಸ್ಥಾನ ಉತ್ತಮವಾಗಿ ಅಭಿವೃದ್ದಿಪಡಿಸಿದೆ‌. ಯಾವುದೇ ಕಾರಣಕ್ಕೂ ಇದನ್ನು ಮುಜರಾಯಿ ಇಲಾಖೆಗೆ ಸೇರಿಸಬಾರದು ಎಂದು‌‌‌ ಆಗ್ರಹಿಸಿದರು. ಆಂಜನೇಯ ಸೇವಾ ಸಮಿತಿಯ ಪ್ರಮುಖರಾದ ದ್ಯಾಮಜ್ಜಿ ಹನುಮಂತಪ್ಪ, ಮ್ಯಾಕಿ ಸಣ್ಣ ಹಾಲಪ್ಪ, ಚಿಕ್ಕೇರಿ ಯಂಕಪ್ಪ, ಕಮ್ಮಾರ ಸಣ್ಣ ಹಾಲಪ್ಪ, ಚಿಕ್ಕೇರಿ ಬಸಪ್ಪ, ದ್ಯಾಮಜ್ಜೆ ದಂಡ್ಯೆಪ್ಪ, ತಿಮ್ಮಣ್ಣ, ನಿಟ್ಟೂರು ತಿಮ್ಮಪ್ಪ, ಗುಂಡಿ ಮಂಜುನಾಥ, ರಾಯದುರ್ಗದ ವಾಗೀಶ, ಪಟ್ನಾಮದ ಪರುಶುರಾಮ, ಚಿಕ್ಕೆರಿ ಪಾಲಾಕ್ಷಪ್ಪ, ಪೂಜಾರ್ ಮಂಜಣ್ಣ, ಬಿದ್ದಪ್ಪ, ಆಲೂರು ಶ್ರೀನಿವಾಸ ಸೇರಿ ಅನೇಕರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
kannada
Homeಕ್ರೀಡೆ

ಹರಪನಹಳ್ಳಿಯಲ್ಲಿ ಗಮನ ಸೆಳೆದ ಬೀಳ್ಕೊಡುಗೆ

ಹರಪನಹಳ್ಳಿ : ಕ್ರೀಡೆ ಮತ್ತು ಇತರ ದೈಹಿಕ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು...

nivrutta
Homeಕಲೆಕ್ರೀಡೆಶಿಕ್ಷಣ

ನೌಕರರ ಹಿತರಕ್ಷಣೆಗೆ ಸಂಘ ಸದಾ ಬದ್ಧ: ಎನ್.ಜಿ. ಮನೋಹರ ಭರವಸೆ

ಹರಪನಹಳ್ಳಿ: "ಸರ್ಕಾರಿ ನೌಕರರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯ ನೌಕರರ ಸಂಘ ಹಾಗೂ ತಾಲೂಕು ಘಟಕವು ಸದಾ ನಿಮ್ಮ ಬೆನ್ನೆಲುಬಾಗಿ ನಿಲ್ಲಲಿದೆ" ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಎನ್.ಜಿ. ಮನೋಹರ ಅವರು ಭರವಸೆ ನೀಡಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ನಿವೃತ್ತ ನೌಕರರು, ನಿವೃತ್ತ ಶಿಕ್ಷಕರು ಹಾಗೂ ಬಡ್ತಿ ಹೊಂದಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ಶಿಕ್ಷಕರು ವೃತ್ತಿಯಿಂದ ನಿವೃತ್ತರಾಗುತ್ತಿದ್ದಾರೆಯೇ ವಿನಃ ಅವರ ಅನುಭವದಿಂದಲ್ಲ. ನಿವೃತ್ತಿಯ ನಂತರವೂ ನಾವು ಮತ್ತು ನಿವೃತ್ತ ನೌಕರರ ಸಂಘ ಸದಾ ನಿಮ್ಮ ಜೊತೆಗಿರುತ್ತೇವೆ. ನಿವೃತ್ತ ಜೀವನದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ವ್ಯಾಯಾಮ, ಪುಸ್ತಕ ಓದುವುದು, ತೋಟಗಾರಿಕೆ, ಸಂಗೀತ, ಕಲೆ, ಯೋಗ ಅಥವಾ ವಾಕಿಂಗ್ ಮಾಡುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು" ಎಂದು ಮನೋಹರ ಅವರು ಕಿವಿಮಾತು ಹೇಳಿದರು. ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಲತಾ ಟಿ.ಎಚ್.ಎಂ ಮಾತನಾಡಿ, "ಮಹಿಳಾ ನೌಕರರಿಗೆ ಋತುಚಕ್ರದ ರಜೆ ಘೋಷಿಸುವಂತೆ ಸರ್ಕಾರಕ್ಕೆ ನಮ್ಮ ಸಂಘಟನೆಯು ಮೊದಲೇ ಧ್ವನಿಗೂಡಿಸಿ ಒತ್ತಾಯಿಸಿತ್ತು. ಹರಪನಹಳ್ಳಿ ತಾಲೂಕಿನಲ್ಲಿ ಈ ಹಿಂದೆ ನೌಕರರ ಪರವಾಗಿ ಇಂತಹ ಸಕ್ರಿಯ ಕಾರ್ಯಕ್ರಮಗಳು ನಡೆದಿರಲಿಲ್ಲ. ಆದರೆ ಪ್ರಸ್ತುತ ಅಧ್ಯಕ್ಷರಾದ ಮನೋಹರ್ ಅವರು ಹತ್ತಾರು ಜನಪರ ಕಾರ್ಯಕ್ರಮಗಳ ಮೂಲಕ ತಾಲೂಕು ಸಂಘಟನೆಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗಿಸಿದ್ದಾರೆ. ಸಂಘಟನೆಗಳು ವೃತ್ತಿಯ ಜೊತೆಗೆ ಪ್ರವೃತ್ತಿಯಾಗಬೇಕೇ ಹೊರತು, ಸಂಘಟನೆಯೇ ವೃತ್ತಿಯಾಗಬಾರದು. ನಾವೆಲ್ಲರೂ ಸೇರಿ ತಾಲೂಕಿನ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ" ಎಂದರು. ಮಂಜುನಾಥ ಪೂಜಾರ್ ಅವರು ಮಾತನಾಡಿ, "ಶಾಲೆಗಳಲ್ಲಿ ೩೦ ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುವ ಶಿಕ್ಷಕರ ಸಮಯಪಾಲನೆ, ಕರ್ತವ್ಯ ನಿಷ್ಠೆ ಮತ್ತು ಮಕ್ಕಳೊಂದಿಗಿನ ಮಧುರ ಬಾಂಧವ್ಯ ನಿಜಕ್ಕೂ ಶ್ಲಾಘನೀಯ. ಇವರ ನಿವೃತ್ತ ಜೀವನ ಸುಖಕರವಾಗಿರಲಿ" ಎಂದು ಹಾರೈಸಿದರು. ಬಿಇಒ ಕಚೇರಿಯ ಇಸಿಒ ವೀರೇಶ್ ಮಾತನಾಡಿ, ನಿವೃತ್ತ ಹಾಗೂ ಬಡ್ತಿ ಪಡೆದ ಮುಖ್ಯ ಶಿಕ್ಷಕರನ್ನು ಕರೆಸಿ ಗೌರವಿಸುತ್ತಿರುವ ನೌಕರರ ಸಂಘದ ಕಾರ್ಯ ಸ್ತುತ್ಯರ್ಹ ಎಂದರು. ಶಿಕ್ಷಕ ಬಿ. ಆಂಜನೇಯ ಅವರೂ ಸಹ ವೇದಿಕೆಯಲ್ಲಿ ಅನಿಸಿಕೆಗಳನ್ನು ಹಂಚಿಕೊಂಡರು. ಇದೇ ವೇಳೆ ನಿವೃತ್ತ ಶಿಕ್ಷಕ ಸಲಾಂ ಅವರು "ಪ್ರೀತಿಯ ಗಾಳಿ ಬೀಸುತ್ತಿದೆ..." ಎಂಬ ಗೀತೆಯನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.  ಸರ್ಕಾರಿ ನೌಕರರ ಸಂಘದ ರಾಜ್ಯ...

darmastala yojane
Homeರಾಜಕೀಯವಿಶೇಷ ವರದಿಗಳು

ದೇವರ ತಿಮ್ಲಾಪುರದಲ್ಲಿ ನಡೆದ ಮದ್ಯವರ್ಜನ ಶಿಬಿರದ ಮಾಹಿತಿ ಇಲ್ಲಿದೆ

ಹರಪನಹಳ್ಳಿ :  "ಇದು ಕೇವಲ ಶಿಬಿರವಲ್ಲ, ಕುಟುಂಬಗಳನ್ನು ಕಟ್ಟುವ ಹಾಗೂ ಹೆಣ್ಣುಮಕ್ಕಳ ಕಣ್ಣೀರು ಒರೆಸುವ ಪವಿತ್ರ ಕಾರ್ಯ. ಅಂಧಕಾರದಲ್ಲಿದ್ದ ಬಾಳಿಗೆ ಬೆಳಕು ನೀಡುವ ಈ ಕಾರ್ಯ ಸಮಾಜಕ್ಕೆ ಮಾದರಿ ಎಂದು ನೀಲಗುಂದ ಗುಡ್ಡದ ವಿರಕ್ತಮಠದ ಚೆನ್ನಬಸವ ಶಿವಯೋಗಿ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ದೇವರ ತಿಮ್ಮಾಲಪುರ ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ '2060ನೇ ಮದ್ಯವರ್ಜನ ಶಿಬಿರ' ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.ಸಂಸಾರದಲ್ಲಿ ಸರಸ, ವಿರಸಗಳು ಬಂದು...

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!
Homeರಾಜಕೀಯ

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವಿರೋಧ ಆಯ್ಕೆ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಶನಿವಾರ ಅತ್ಯಂತ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸದಾ ಕುತೂಹಲ ಮೂಡಿಸುತ್ತಿದ್ದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.