Home ರಾಜಕೀಯ ಸಿಎಂ ಡಿ.ಕೆ.ಶಿವಕುಮಾರ, ಡಿಸಿಎಂ ಪರಮೇಶ್ವರ್ ಸೇರಿ ಇಂದು 14 ಜನ ಪ್ರಮಾಣವಚನ ಸಾದ್ಯತೆ
ರಾಜಕೀಯವಿಶೇಷ ವರದಿಗಳು

ಸಿಎಂ ಡಿ.ಕೆ.ಶಿವಕುಮಾರ, ಡಿಸಿಎಂ ಪರಮೇಶ್ವರ್ ಸೇರಿ ಇಂದು 14 ಜನ ಪ್ರಮಾಣವಚನ ಸಾದ್ಯತೆ

Share
Share

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಮುಖ್ಯಾಂಶಗಳಿಗೆ ಕಾರಣವಾಗಬಲ್ಲ ಮಹತ್ವದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕ ಡಿ.ಕೆ. ಶಿವಕುಮಾರ್ ಅವರ ಸಹಿ ಇರುವ ಪತ್ರವೊಂದು ರಾಜ್ಯಪಾಲರಿಗೆ ಸಲ್ಲಿಕೆಯಾಗಿದೆ.

ವೈರಲ್ ಆಗಿರುವ ಪತ್ರದ ಪ್ರಕಾರ, ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಹಾಗೂ ದಲಿತ ಸಮುದಾಯದ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಉಲ್ಲೇಖವಿದೆ. ಇವರೊಂದಿಗೆ ಒಟ್ಟು 14 ನಾಯಕರ ಹೆಸರನ್ನು ಸಚಿವರ ಪಟ್ಟಿಯಲ್ಲಿ ಹೆಸರಿಸಲಾಗಿದೆ.

ಯಾರಿಗೆಲ್ಲ ಸಿಗಲಿದೆ ಸಚಿವ ಸ್ಥಾನ? ಪತ್ರದಲ್ಲಿರುವ ಲಿಸ್ಟ್ ಇಲ್ಲಿದೆ:

1. ಡಿ.ಕೆ. ಶಿವಕುಮಾರ್ – ಮುಖ್ಯಮಂತ್ರಿ
2. ಡಾ. ಜಿ. ಪರಮೇಶ್ವರ್- ಉಪಮುಖ್ಯಮಂತ್ರಿ
3. ಕೆ.ಎಚ್. ಮುನಿಯಪ್ಪ – ಸಚಿವರು
4. ಕೆ.ಜೆ. ಜಾರ್ಜ್- ಸಚಿವರು
5. ಎಂ.ಬಿ. ಪಾಟೀಲ್- ಸಚಿವರು
6. ರಾಮಲಿಂಗಾರೆಡ್ಡಿ – ಸಚಿವರು
7. ಸತೀಶ್ ಜಾರಕಿಹೊಳಿ- ಸಚಿವರು
8. ಕೃಷ್ಣ ಬೈರೇಗೌಡ – ಸಚಿವರು
9. ಪ್ರಿಯಾಂಕ್ ಖರ್ಗೆ – ಸಚಿವರು
10. ಯು.ಟಿ. ಖಾದರ್- ಸಚಿವರು
11. ಈಶ್ವರ್ ಖಂಡ್ರೆ- ಸಚಿವರು
12. ಡಾ. ಯತೀಂದ್ರ ಸಿದ್ದರಾಮಯ್ಯ – ಸಚಿವರು
13. ಬೈರತಿ ಸುರೇಶ್ – ಸಚಿವರು
14. ಡಾ. ಶರಣಪ್ರಕಾಶ್ ಪಾಟೀಲ್- ಸಚಿವರು

ಹೈಕಮಾಂಡ್‌ನ ಸಾಮಾಜಿಕ ನ್ಯಾಯದ ಸೂತ್ರ

ಪಕ್ಷದ ಆಂತರಿಕ ಭಿನ್ನಮತ ಶಮನಗೊಳಿಸಲು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಬಲಪಡಿಸಲು ಹೈಕಮಾಂಡ್ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಹಳೆ ಮೈಸೂರು ಭಾಗದಲ್ಲಿ ಹಿಡಿತ ಸಾಧಿಸಲು ಡಿ.ಕೆ. ಶಿವಕುಮಾರ್ ಅವರಿಗೆ ಸಾರಥ್ಯ ನೀಡಲಾಗುತ್ತಿದ್ದರೆ, ದಲಿತ ಮತಬ್ಯಾಂಕ್ ಕಾಯ್ದುಕೊಳ್ಳಲು ಜಿ. ಪರಮೇಶ್ವರ್ ಅವರಿಗೆ ಡಿಸಿಎಂ ಪಟ್ಟ ನೀಡಲಾಗುತ್ತಿದೆ. ಇದರೊಂದಿಗೆ ಯುವ ನಾಯಕ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕರನ್ನು ಒಳಗೊಂಡ ಸಮತೋಲಿತ ಸಂಪುಟ ರಚನೆಗೆ ಕಸರತ್ತು ನಡೆದಿದೆ ಎಂಬುದು ಈ ಪತ್ರದಿಂದ ಸ್ಪಷ್ಟವಾಗುತ್ತದೆ.

Share

Leave a comment

Leave a Reply

Your email address will not be published. Required fields are marked *

Related Articles
DKS BANGLORE
Homeರಾಜಕೀಯ

ಕೆ.ಎಚ್.ಮುನಿಯಪ್ಪಗೆ ಸಮಾಜ ಕಲ್ಯಾಣ, ಉಳಿದವರಿಗೆ ಯಾವ ಖಾತೆ ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ...

Homeರಾಜಕೀಯ

ಬಿಜೆಪಿ ಹಿರಿಯ ನಾಯಕರ ದಂಡು: ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಶ್ರೀರಾಮುಲು, ಕರುಣಾಕರ ರೆಡ್ಡಿ ಭಾಗಿ :

ವಿಜಯನಗರ :  ಜಿಲ್ಲೆಯ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ...

Homeವಿಶೇಷ ವರದಿಗಳು

ಜು.05 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ :  ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್...

Homeವಿಶೇಷ ವರದಿಗಳು

ವ್ಯಕ್ತಿ ಕಾಣೆ : ಪತ್ತೆಗೆ ಮನವಿ

ಬಳ್ಳಾರಿ :  ತಾಲ್ಲೂಕಿನ ಸಂಗನಕಲ್ಲು ಗ್ರಾಮದ ಸಂಗಮೇಶ್ವರ ಶಾಲೆ ಹತ್ತಿರದ ನಿವಾಸಿಯಾದ ಗುರುರಾಜ್ ರಾವ್.ಬಿ ಎನ್ನುವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.