ಹರಪನಹಳ್ಳಿ : ಇಲ್ಲಿಯ ಹರಿಪುರ ಯೋಜನಾ ಕಚೇರಿ ವ್ಯಾಪ್ತಿಯ ತಾಲ್ಲೂಕಿನ ದೇವರ ತಿಮ್ಮಾಪುರ ಗ್ರಾಮದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಜನಜಾಗೃತಿ ಮೂಡಿಸುವ ಬೀದಿ ನಾಟಕ ಜರುಗಿತು.
ಚಾಲನೆ ನೀಡಿದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರಸನ್ನ ಪೂಜಾರಿ ಮಾತನಾಡಿ, ಗ್ರಾಮಾಭಿವೃದ್ದಿ ಯೋಜನೆಯು ದುಶ್ಚಟ ಮುಕ್ತ ಸಮಾಜ ನಿರ್ಮಾಣ, ಶುದ್ಧ ಕುಡಿಯುವ ನೀರು ಹಾಗೂ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.
ಕ್ಷೇತ್ರ ಯೋಜನಾಧಿಕಾರಿ ಗಣಪತಿ ಭಟ್ ಮಾತನಾಡಿ, ಸಂಸ್ಥೆಯು ನೀಡುವ ಸೌಲಭ್ಯಗಳು ಮತ್ತು ಹಮ್ಮಿಕೊಳ್ಳುವ ಇಂತಹ ಜಾಗೃತಿ ಶಿಬಿರಗಳ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಮುಖಂಡರಾದ ರಾಮಣ್ಣ, ವೀರಾಚಾರಿ, ಭರ್ಮಪ್ಪ, ನಾಗರಾಜ್, ಬಸವರಾಜ್, ಎಂ.ಡಿ. ತಿಮ್ಮಣ್ಣ, ಮರಕುಂಟಿ ಬಸಣ್ಣ ಹಾಗೂ ಒಕ್ಕೂಟದ ಅಧ್ಯಕ್ಷೆ ರೇಣುಕಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಅನಿತಾ, ಸೇವಾ ಪ್ರತಿನಿಧಿ ಸುನಿತಾ ಇದ್ದರು.
Leave a comment