ಹರಪನಹಳ್ಳಿ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುತ್ತಿದ್ದಂತೆ, ಇತ್ತ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಸಡಗರ, ಸಂಭ್ರಮ ಮುಗಿಲು ಮುಟ್ಟಿತ್ತು.
ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಒಟ್ಟು 14 ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಐತಿಹಾಸಿಕ ಕ್ಷಣವನ್ನು ವೀಕ್ಷಿಸಲು ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಎಲ್.ಇ.ಡಿ ಪರದೆ ಅಳವಡಿಸಲಾಗಿತ್ತು.
ನೂತನ ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ನೆರೆದಿದ್ದ ಸಾರ್ವಜನಿಕರು ಹಾಗೂ ಕಾರ್ಯಕರ್ತರು ಜಯಘೋಷ ಕೂಗಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಉದಯಶಂಕರ್, ಪ್ರಮುಖ ಮುಖಂಡರಾದ ಮತ್ತೂರು ಬಸವರಾಜ್, ನಿಟ್ಟೂರು ಹನುಮಂತಪ್ಪ, ಶಶಿಧರ ನಾಯ್ಕ ಇದ್ದರು.
ಸೇರಿದಂತೆ ನೂರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಂಡು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಹೊಸ ಸರ್ಕಾರದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮತ್ತಷ್ಟು ಪ್ರಗತಿಯಾಗಲಿ ಎಂದು ಮುಖಂಡರು ಆಶಿಸಿದರು.
Leave a comment