Home ಸುದ್ದಿಗಳು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ
ಸುದ್ದಿಗಳು

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ

Share
Share

ದಾವಣಗೆರೆ   : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.  ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಮಾನ್ಯ ಪ್ರಾಚಾರ್ಯರಾದ ಡಾ. ಶುಕ್ಲ ಎಸ್. ಶೆಟ್ಟಿ ಅವರು ಸಸಿ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಇಂದಿನ ಅಗತ್ಯವಾಗಿದ್ದು, ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಮಾಲಿನ್ಯ, ಅರಣ್ಯ ನಾಶ, ಹವಾಮಾನ
ಬದಲಾವಣೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.ಹಾಗೂ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮೊದಲು ಗಿಡಗಳನ್ನು ಮಾತನಾಡಿಸಿ ಎಂದು ಕರೆ
ಕೊಟ್ಟರು. ಹಸಿರು ಪರಿಸರ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದರ ಪೋಷಣೆ ಮಾಡುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ಪ್ರತಿನಿತ್ಯದ ಜೀವನದ ಭಾಗವಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಅರಿತುಕೊಂಡರು. ಸಸಿ ನೆಡುವ ಮೂಲಕ ಪರಿಸರ ರಕ್ಷಣೆಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.