Home ಪರಿಸರ ಜಾಗೃತಿಗಾಗಿ ದಾವಣಗೆರೆಯಲ್ಲಿ ಸೈಕಲ್ ಜಾಥಾ
Homeಕ್ರೀಡೆ

ಪರಿಸರ ಜಾಗೃತಿಗಾಗಿ ದಾವಣಗೆರೆಯಲ್ಲಿ ಸೈಕಲ್ ಜಾಥಾ

Share
renukadevi
Share

ದಾವಣಗೆರೆ  : ಯುವಜನರು ಮತ್ತು ವಿದ್ಯಾರ್ಥಿಗಳು ದೈನಂದಿನ ಜೀವನದಲ್ಲಿ ಸೈಕಲ್ ಬಳಕೆಯನ್ನು ಹೆಚ್ಚಿಸಬೇಕು ಎಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠಲ್ ಅವರು ಕರೆ ನೀಡಿದ್ದಾರೆ.

‘ವಿಶ್ವ ಸೈಕಲ್ ದಿನಾಚರಣೆ’ಯ ಪ್ರಯುಕ್ತ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಅರ್ಥಪೂರ್ಣ ‘ಸೈಕಲ್ ಜಾತಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ಪ್ರತಿನಿತ್ಯ 11 ಕಿ.ಮೀ ಸೈಕಲ್ ತುಳಿಯುತ್ತಿದ್ದ ದಿನಗಳನ್ನು ಈ ವೇಳೆ ಅವರು ಹಂಚಿಕೊಂಡರು.

ಹಿರಿಯ ಪತ್ರಕರ್ತ ಡಾ. ಎಚ್. ಬಿ. ಮಂಜುನಾಥ್ ಮಾತನಾಡಿ, ಸೈಕಲ್ ತುಳಿಯುವುದರಿಂದ ನಮ್ಮ ದೈಹಿಕ ಆರೋಗ್ಯ ಸುಧಾರಿಸುವುದಲ್ಲದೆ, ವಾಯು ಮತ್ತು ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಬರುತ್ತದೆ. ನಮ್ಮ ದೇಶದಲ್ಲಿ ವಾರ್ಷಿಕ 245 ಮಿಲಿಯನ್ ಮೆಟ್ರಿಕ್ ಟನ್ ಹಾಗೂ ನಿತ್ಯ 6 ಕೋಟಿ ಬ್ಯಾರಲ್ ಪೆಟ್ರೋಲಿಯಂ ಖರ್ಚಾಗುತ್ತಿದ್ದು, ಇದರಲ್ಲಿ ಶೇ.62 ರಷ್ಟು ಕೇವಲ ದ್ವಿಚಕ್ರ ವಾಹನಗಳಿಗೇ ಬಳಕೆಯಾಗುತ್ತಿದೆ ಎಂದರು.

ವಾರದಲ್ಲಿ ಕೇವಲ ಒಂದು ದಿನ ಬೈಕ್ ಅಥವಾ ಸ್ಕೂಟರ್ ಬದಲು ಸೈಕಲ್ ಬಳಸಿದರೆ ವಾರ್ಷಿಕ 320 ಕೋಟಿ ಬ್ಯಾರಲ್ ಪೆಟ್ರೋಲ್ ಉಳಿಸಬಹುದು. ಸೈಕಲ್ ತುಳಿಯುವುದರಿಂದ ಸಮಯ ವ್ಯರ್ಥವಾಗುತ್ತದೆ ಎಂಬುದು ತಪ್ಪು ಕಲ್ಪನೆ, ಬದಲಾಗಿ ಇದು ಸಮಯದ ಸದ್ಬಳಕೆಯ ಅರಿವು ಮೂಡಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಬೈಸಿಕಲ್ ಕ್ಲಬ್ ಹಾಗೂ ಹಿಮಾಲಯನ್ ಅಡ್ವೆಂಚರ್ ಅಂಡ್ ನೇಚರ್ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ಈ ಜಾತಾ ನಡೆಯಿತು.

ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ರೇಣುಕಾ ದೇವಿ, ಗ್ರಾಹಕ ಕೋರ್ಟ್‌ನ ಮಾಜಿ ನ್ಯಾಯಾಧೀಶ ಶಿವಕುಮಾರ್, ದಾವಣಗೆರೆ ಬೈಸಿಕಲ್ ಕ್ಲಬ್ ಕಾರ್ಯದರ್ಶಿ ಕೆ. ಮಹೇಶ್, ಎನ್.ಕೆ. ಕೊಟ್ರೇಶ್, ಕಿರಣ್ ಬಾಳೆಹೊಲದ, ಪ್ರಸಾದ್, ಚಂದ್ರಮೌಳಿ, ಮಧುಸೂದನ್, ಚನ್ನಬಸವ ಶೀಲವಂತ್, ಬ್ರಿಜೇಶ್, ಪರೀಕ್ಷಿತ್ ಸೇರಿದಂತೆ ಹಲವು ಪ್ರಮುಖರು ಹಾಗೂ ಕ್ರೀಡಾ ಇಲಾಖೆ ಸಿಬ್ಬಂದಿ ಉತ್ಸಾಹದಿಂದ ಪಾಲ್ಗೊಂಡಿದ್ದರು.

 

 

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.