Home ಹರಪನಹಳ್ಳಿ: ಪಂಚಮಸಾಲಿ ನೌಕರರ ಸಂಘದ ಪ್ರತಿಭಾ ಪುರಸ್ಕಾರ ಜೂನ್ 28ಕ್ಕೆ ಮುಂದೂಡಿಕೆ
Homeಶಿಕ್ಷಣ

ಹರಪನಹಳ್ಳಿ: ಪಂಚಮಸಾಲಿ ನೌಕರರ ಸಂಘದ ಪ್ರತಿಭಾ ಪುರಸ್ಕಾರ ಜೂನ್ 28ಕ್ಕೆ ಮುಂದೂಡಿಕೆ

Share
Share

ಹರಪನಹಳ್ಳಿ : ತಾಲೂಕು ಪಂಚಮಸಾಲಿ ಲಿಂಗಾಯತ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮವನ್ನು ಜೂನ್ 28ಕ್ಕೆ ಮುಂದೂಡಲಾಗಿದೆ.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಶಿಕ್ಷಕ ಗೌಡ್ರು ಕರಿಬಸಪ್ಪ ಅವರ ನೇತೃತ್ವದಲ್ಲಿ ಜೂನ್ 14ರಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಹಾಗೂ ಪಿಯುಸಿಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕ ಪಡೆದ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ಈ ಹಿಂದೆ ಜೂನ್ 21ರಂದು ನಡೆಸಲು ನಿಗದಿಪಡಿಸಲಾಗಿತ್ತು.

ಆದರೆ, ಅಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ‘ನೀಟ್’ (NEET) ಪರೀಕ್ಷೆಗಳು ಇರುವುದರಿಂದ, ವಿದ್ಯಾರ್ಥಿಗಳು ಹಾಗೂ ಪೋಷಕರ ಅನುಕೂಲಕ್ಕಾಗಿ ಕಾರ್ಯಕ್ರಮವನ್ನು ಜೂನ್ 28ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಹರಿಹರ ವೃತ್ತದಲ್ಲಿರುವ ನಟರಾಜ ಕಲಾಭವನದಲ್ಲಿ ಹಮ್ಮಿಕೊಳ್ಳಲು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಲಿಂಗಾಯತ ಪಂಚಮಸಾಲಿ ನೌಕರರ ಘಟಕವು ಪ್ರಕಟಣೆಯಲ್ಲಿ ಕೋರಿದೆ.

ನೋಂದಣಿಗೆ ಜೂನ್ 20 ಕಡೆಯ ದಿನ :
ಪ್ರತಿಭಾ ಪುರಸ್ಕಾರಕ್ಕೆ ಅರ್ಹರಿರುವ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಹಾಗೂ ಸನ್ಮಾನ ಸ್ವೀಕರಿಸಲಿರುವ ನಿವೃತ್ತ ನೌಕರರು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಜೂನ್ 20 ಅಂತಿಮ ದಿನವಾಗಿದೆ. ಅರ್ಹರು ತಮ್ಮ ಸೂಕ್ತ ದಾಖಲೆಗಳೊಂದಿಗೆ ಕೆ. ವೀರಪ್ಪ (9008364936), ಮಂಜುನಾಥ ಗೌಡ್ರು (9902757475), ವಿಜಯಕುಮಾರ್ (9663924970) ಅಥವಾ ರವಿಕುಮಾರ್ ದೊಡ್ಡಮನಿ (8105745006) ಅವರನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ತಿಳಿಸಲಾಗಿದೆ.

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಮಳೆಗಾಗಿ ಮುಸ್ಲಿಂರಿಂದ ಸಲಾತ್ ಆಲ್‍ ಇಸ್ತಿಸ್ಕಾ ಪ್ರಾರ್ಥನೆ

ಹರಪನಹಳ್ಳಿ : ಬಿತ್ತನೆ ಮಾಡಿ ಎದೆಯುದ್ದ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗಾಗಿ ಅಲ್ಲಾನ (ದೇವರ) ಮೊರೆ...

Homeಸುದ್ದಿಗಳು

ಗ್ರಾಪಂ ಗಳಿಗೆ ಅನುದಾನ ಕಡಿತ ಖಂಡಿಸಿ ಪ್ರತಿಭಟನೆ

ಹರಪನಹಳ್ಳಿ : ಗ್ರಾಮ ಪಂಚಾಯಿತಿಗಳಿಗೆ ಅನುದಾನ ಕಡಿತಗೊಳಿಸಿರುವುದನ್ನು ಖಂಡಿಸಿ ಅಖಿಲ ಭಾರತ ಕಿಸಾನ್ ಸಭಾ ಹಗರಿಗುಡಿಹಳ್ಳಿ...

Homeಸುದ್ದಿಗಳು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪೋಷಣ್ ಮಾಸಾಚರಣೆ ಕಾರ್ಯಕ್ರಮ 

ವಿಜಯನಗರ : ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ವಲಯದ ಪಾಪಿನಾಯಕನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ  4ರಲ್ಲಿ...

Homeಸುದ್ದಿಗಳು

ಸೆ.25ರಂದು ದಿಶಾ ಸಮಿತಿ ಪ್ರಗತಿ ಪರಿಶೀಲನಾ ಸಭೆ

ವಿಜಯನಗರ : ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೆಪ್ಟೆಂಬರ್ 25ರಂದು ಬೆಳಗ್ಗೆ 11 ಗಂಟೆಗೆ ಸಂಸದರಾದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.