ಹರಪನಹಳ್ಳಿ: ತಾಲೂಕಿನ ಸೇವಾನಗರ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (AISA) ವತಿಯಿಂದ ಶುಕ್ರವಾರ (ಜೂನ್ 19) ಸಾಂಕೇತಿಕ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಹಾಗೂ ಸಾರಿಗೆ ಸಂಸ್ಥೆಯ ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಹಿಂದೆಯೂ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು.
ಆದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಬಸ್ ಸೌಲಭ್ಯವಿಲ್ಲದೆ ಸೇವಾನಗರ ಗ್ರಾಮದ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಆಸ್ಪತ್ರೆಗೆ ತೆರಳುವ ವಯೋವೃದ್ಧರು, ರೋಗಿಗಳು ತೀವ್ರ ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಮುಖ ಬೇಡಿಕೆಗಳು:
* ಹರಪನಹಳ್ಳಿಯಿಂದ ದಾವಣಗೆರೆಗೆ ಹೋಗುವ ಸರ್ಕಾರಿ ಬಸ್ಗಳನ್ನು ಚಿಗಟೇರಿ ಗ್ರಾಮದ ಶಿಲ್ಪಿ ರಸ್ತೆಯ ಮೂಲಕ ಸೇವಾನಗರ ಗ್ರಾಮಕ್ಕೆ ಬಂದು ಹೋಗುವಂತೆ ಮಾಡಬೇಕು.
* ಕಾಂಚಿಕೆರೆಯಿಂದ ಬರುವ ಬಸ್ಗಳು ಕಡ್ಡಾಯವಾಗಿ ಸೇವಾನಗರದ ಮುಖಾಂತರ ಸಂಚರಿಸುವಂತೆ ತಕ್ಷಣವೇ ಆದೇಶ ಹೊರಡಿಸಬೇಕು.
*ಸಮಸ್ಯೆಯನ್ನು ಶೀಘ್ರವೇ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಮನವಿಯಲ್ಲಿ ನೀಡಲಾಗಿದೆ. ಈ ಸಂದರ್ಭದಲ್ಲಿ ಎಐಎಸ್ಎ ತಾಲೂಕು ಸಮಿತಿಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Leave a comment