Home ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಪಿಯು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ :
Homeಆರೋಗ್ಯ

ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಪಿಯು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ :

Share
Share

ಹರಪನಹಳ್ಳಿ: ದೈಹಿಕ ಹಾಗೂ ಮನಸ್ಸಿನ ಆರೋಗ್ಯಕ್ಕಾಗಿ, ಆತ್ಮವಿಶ್ವಾಸಕ್ಕಾಗಿ,ಏಕಾಗ್ರತೆ ಹೆಚ್ಚಿಸುವುದಕ್ಕಾಗಿ ಯೋಗ ಅವಶ್ಯಕವಾಗಿದೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಉಪನ್ಯಾಸಕ ಹೆಚ್.ಶಿವಾನಂದ ಹೇಳಿದರು.
ಪಟ್ಟಣದ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ. ಹೆಚ್. ಪಿ ಎಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಾ ಯೋಗ ನಮ್ಮ ಸಂಸ್ಕೃತಿಯ ಪ್ರಮುಖ ಭಾಗ ಇಂದು ಬದಲಾದ ಕಾಲಘಟ್ಟದಲ್ಲಿ ನಮ್ಮ ಆರೋಗ್ಯದ ಕಡೆಗೆ ಗಮನಹರಿಸಬೇಕಾದ ಅಗತ್ಯವಿದೆ.

ಯೋಗದಿಂದ ಸದೃಢ ಮಾನಸಿಕ ಮತ್ತು ದೈಹಿಕ ಆರೋಗ್ಯ ಹೊಂದಲು ಸಾಧ್ಯ ಇಂದಿನ ಮಕ್ಕಳಿಗೆ ಏಕಾಗ್ರತೆ ಒತ್ತಡದ ಬದುಕಿನಿಂದ ದೂರವಿರಲು ಯೋಗ ಅತ್ಯಂತ ಮಹತ್ವದಾಗಿದೆ ಮತ್ತು ಯೋಗದಿಂದ ಮಾನಸಿಕವಾಗಿ, ಶರೀರಿಕವಾಗಿ, ಆರೋಗ್ಯ ಪಡೆದುಕೊಳ್ಳಬಹುದು ವಿದ್ಯಾರ್ಥಿಗಳು ಯೋಗಕ್ಕೆ ಹೆಚ್ಚಿನ ಮಹತ್ವ ಕೊಟ್ಟು ಪ್ರತಿದಿನ ಅರ್ಧ ಗಂಟೆ ಯೋಗ ಅಭ್ಯಾಸ ಮಾಡಿದರೆ ಶ್ರದ್ಧೆ, ಆತ್ಮಸ್ಥೈರ್ಯ, ನೆನಪಿನ ಶಕ್ತಿ ಹೆಚ್ಚಾಗುತ್ತದೆ ವಿದ್ಯಾರ್ಥಿಗಳು ಮಾನಸಿಕ ಆರೋಗ್ಯಕ್ಕಾಗಿ ನಿತ್ಯ ಯೋಗ,ಪ್ರಾಣಾಯಾಮ, ಧ್ಯಾನ ಮಾಡುವುದರಿಂದ ರೋಗದಿಂದ ದೂರ ಇರಬಹುದು ಉತ್ತಮ ಆರೋಗ್ಯ ಪಡೆದುಕೊಳ್ಳಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶಿವಗಂಗಮ್ಮ ಪಿ ವಹಿಸಿಕೊಂಡು ಮಾತನಾಡಿ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿರಲು ಯೋಗ ಸಹಕಾರಿ ಮನಸ್ಸುನ್ನು ನಿಯಂತ್ರಣದಲ್ಲಿರಡಲು ಹಾಗೂ ಸಮಸ್ಥಿತಿ ಕಾಪಾಡಲು ಯೋಗ ಒಳ್ಳೆಯದು ಯೋಗದಿಂದ ಹೃದಯ ಸಂರಕ್ಷಣೆ ಶರೀರ ದೃಢತೆ, ಮಾನ್ಯ ಮಾನಸಿಕ ಸ್ವಾಸ್ಥ್ಯ, ಶರೀರದ ಬೆಳವಣಿಗೆ ಸಾದಾ ಕ್ರಿಯಾಶೀಲತೆ ಮತ್ತು ಚಲನಶೀಲತೆಯಿಂದ ಇರಲು ಯೋಗ ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತಿ ಉಪನ್ಯಾಸಕರಾದ ಬಸವರಾಜಪ್ಪ ಸಿ.ಎಸ್, ರವೀಂದ್ರ ಕೆ.ಬಿ, ವೀರೇಶ್ ಎಂ.ಎಸ್, ಮಹಾಲಿಂಗಪ್ಪ ಬಿ. ಗೌಡರ, ಶ್ವೇತ ಎಂ.ಬಿ, ಮಂಜುನಾಥ್ ಮಾಳ್ಗಿ, ಗುರುಬಸವರಾಜ್. ಹೆಚ್, ಅವಿನಾಶ್, ಸೌಭಾಗ್ಯ, ಸುಮಾ ಮತ್ತು ಕಾಲೇಜಿನ ಸಿಬ್ಬಂದಿಗಳು, ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.