Home ಕಾಯಕ‌ ಸ್ಥಳದಲ್ಲೇ ಕಾರ್ಮಿಕರಿಂದ ಯೋಗಾಭ್ಯಾಸ
Homeಆರೋಗ್ಯ

ಕಾಯಕ‌ ಸ್ಥಳದಲ್ಲೇ ಕಾರ್ಮಿಕರಿಂದ ಯೋಗಾಭ್ಯಾಸ

Share
Share

ಹರಪನಹಳ್ಳಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ದುಡಿಯುವ ಗ್ರಾಮೀಣ ಪ್ರದೇಶದ ಜನರಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಅರಿವು ಮೂಡಿಸುವ ಉದ್ದೇಶದಿಂದ, ಇಂದು ಮತ್ತಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ಎನ್ ಶಿರನಹಳ್ಳಿ ಗ್ರಾಮದಲ್ಲಿ ನರೇಗಾ ಕೆಲಸದ ಸ್ಥಳದಲ್ಲಿ ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.ದೈನಂದಿನ ಕೆಲಸ ಆರಂಭಿಸುವ ಮುನ್ನ, ಕೂಲಿ ಕಾರ್ಮಿಕರು ಸಾಮೂಹಿಕವಾಗಿ ಯೋಗಾಸನ ಮತ್ತು ಪ್ರಾಣಾಯಾಮ, ಕಪಾಲಭಾಸಿ, ಅನುಲೋಮ-ವಿಲೋಮ ಮಾಡಿದರು.

ಸ್ಥಳೀಯ ಯೋಗ ತರಬೇತುದಾರ ಹಾಗೂ ಮೆಟ್ ದಕ್ಷಿಣಮೂರ್ತಿ ಕಿತ್ತೂರು ಕಾರ್ಮಿಕರಿಗೆ ಸರಳವಾದ ಯೋಗಭ್ಯಾಸಗಳನ್ನು ಮಾಡಿಸಿ, ನಿತ್ಯ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯಕ್ಕೆ ಆದ್ಯತೆ ನಿರಂತರ ದೈಹಿಕ ದುಡಿಮೆಯಲ್ಲಿ ತೊಡಗುವ ಕಾರ್ಮಿಕರು, ಯೋಗ ಮಾಡುವುದರಿಂದ ಬೆನ್ನುನೋವು, ಕೀಲುನೋವು ಸೇರಿದಂತೆ ದೈಹಿಕ ಒತ್ತಡದಿಂದ ಮುಕ್ತಿ ಪಡೆಯಬಹುದು ಎಂದು ತಜ್ಞರು ತಿಳಿಸಿದರು.ಜನರ ಭಾಗಿತ್ವ ಈ ವಿಶೇಷ ಕಾರ್ಯಕ್ರಮದಲ್ಲಿ ನರೇಗಾ ಮೇಲ್ವಿಚಾರಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದು, ಕಾರ್ಮಿಕರ ಜೊತೆ ಯೋಗಾಸನದಲ್ಲಿ ಪಾಲ್ಗೊಂಡರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.