Home ಕಡಗಂಚಿ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆ
Homeಆರೋಗ್ಯ

ಕಡಗಂಚಿ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆ

Share
Share

ಆಳಂದ (ಕಡಗಂಚಿ): ಯೋಗವು ಕೇವಲ ದೈಹಿಕ ಕಸರತ್ತಲ್ಲ; ಅದು ನಮ್ಮ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ಗಟ್ಟಿಗೊಳಿಸುವ ಅದ್ಭುತ ಶಕ್ತಿ ಎಂದು ಮುಖ್ಯ ಅತಿಥಿ ಫಾ. ವಿಲಿಯಂ ಮಿರಾಂದ ಹೇಳಿದರು. ಇಲ್ಲಿನ ಮೌಂಟ್ ಕಾರ್ಮೆಲ್ ಸಿಬಿಎಸ್‌ಇ ಶಾಲೆಯಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇಂದಿನ ಒತ್ತಡದ ಬದುಕಿನಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಶಿಸ್ತು ಬೆಳೆಸಿಕೊಳ್ಳಲು ಯೋಗ ಅತ್ಯಂತ ಸಹಕಾರಿ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನನಿತ್ಯದ ಜೀವನದಲ್ಲಿ ಯೋಗವನ್ನು ಒಂದು ಹವ್ಯಾಸವಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ವ್ಯವಸ್ಥಾಪಕ ರೆ. ಫಾ. ಸಿಪ್ರಿಯನ್ ಫರ್ನಾಂಡಿಸ್ ಮಾತನಾಡಿ, ಆರೋಗ್ಯಕರ ಜೀವನಶೈಲಿಗೆ ಯೋಗವೇ ರಹದಾರಿ ಎಂದರು. ಇದೇ ಸಂದರ್ಭದಲ್ಲಿ ಶಾಲೆಯ ದೈಹಿಕ ಶಿಕ್ಷಕ ಶರಣಪ್ಪ ಹಾಗೂ ವಿದ್ಯಾರ್ಥಿಗಳು ಜಂಟಿಯಾಗಿ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ನಂತರ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಒಟ್ಟಾಗಿ ಯೋಗಾಭ್ಯಾಸ ಮಾಡಿದರು. ವೇದಿಕೆಯಲ್ಲಿ ಶಾಲೆಯ ಪ್ರಾಂಶುಪಾಲ ಫಾ. ಸಂದೀಪ್ ಗೋವಿಯಾಸ್ ಉಪಸ್ಥಿತರಿದ್ದರು. ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.