Home ಕಿವುಡ ಮತ್ತು ಮೂಕ ಮಕ್ಕಳಿಗೆ ಆಹಾರ ಕಿಟ್ ವಿತರಣೆ
Homeಶಿಕ್ಷಣ

ಕಿವುಡ ಮತ್ತು ಮೂಕ ಮಕ್ಕಳಿಗೆ ಆಹಾರ ಕಿಟ್ ವಿತರಣೆ

Share
Share

ಕಡಗಂಚಿ:  ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಇಂದು ಕಲಬುರಗಿ ಹೊರವಲಯದ ನಾಗನಹಳ್ಳಿ ರಸ್ತೆ, ಜೆಮ್ ಶೆಟ್ಟಿ ನಗರದಲ್ಲಿ ಇರುವ ಶ್ರೀಯಾನ್ ಕಿವುಡ ಮತ್ತು ಮೂಕ ಮಕ್ಕಳಿಗೆ ಆಹಾರ ಪದಾರ್ಥಗಳನ್ನು ನೀಡಿದರು.

ಸುಮಾರು 75 ಬಡ ಕುಟುಂಬದಲ್ಲಿ ಜನಿಸಿರುವ ಈ ಮಕ್ಕಳನ್ನು ಶ್ರೀಯಾನ್ ಸಂಸ್ಥೆ ಉಚಿತವಾಗಿ ಊಟ,ವಸತಿ ಮತ್ತು ವಿದ್ಯಾಭ್ಯಾಸವನ್ನು ನೀಡುತ್ತದೆ.

ಕಿವುಡುತನ ಮತ್ತು ಮೂಕತನ ಇದ್ದರೂ ಈ ಮಕ್ಕಳು ಇತರ ಮಕ್ಕಳಿಗಿಂತ ಕಡಿಮೆ ಇಲ್ಲ ಎಂಬುದನ್ನು ಈ ಮಕ್ಕಳ ಪ್ರತಿಭೆಯನ್ನು ನೋಡಿ ಕಲಿಯಬೇಕು. ಆದರೆ ಇಷ್ಟು ಮಕ್ಕಳಿಗೆ ಪ್ರತಿ ದಿನ ಊಟ,ಬಟ್ಟೆ, ಕಲಿಕೆಯ ಸಾಮಾಗ್ರಿಗಳು, ಇನ್ನಿತರ ಸೌಲಭ್ಯಗಳನ್ನು ಒದಗಿಸುವುದು ಕಷ್ಟಕರ. ಈ ನಿಟ್ಟಿನಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಕಳೆದ ಒಂದು ವರ್ಷದಿಂದ ಈ ಮಕ್ಕಳಿಗೆ ವಿವರಣೆ ರೀತಿಯಲ್ಲಿ ಸಹಾಯ ಮಾಡುತ್ತಾ ಬಂದಿದೆ.

ಇವತ್ತು ಅಕ್ಕಿ, ಬೇಳೆ,ಗೋದಿಹಿಟ್ಟು,ಸಕ್ಕರೆ, ಬೆಲ್ಲ, ಟೀ ಪುಡಿ, ಎಣ್ಣೆ, ಉಪ್ಪು, ತರಕಾರಿಗಳನ್ನು ನೀಡುವ ಮೂಲಕ ಮಾನವೀಯತೆಯನ್ನು ತೋರಿಸಿದೆ. ಈ ಸಂದರ್ಭದಲ್ಲಿ ಶ್ರೀಯಾನ್ ಸಂಸ್ಥೆಯ ಮುಖ್ಯಸ್ಥ ಶ್ರೀ ರಾಜು, ಸಿಬ್ಬಂದಿ, ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ನ ನಿರ್ದೇಶಕ ಫಾ. ವಿಲಿಯಂ ಮಿರಾಂದ, ಮಂಜುನಾಥ್ ಉಪಸ್ಥಿತರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.