Home ತುಂಗಭದ್ರಾ ಜಲಾಶಯದಲ್ಲಿ ನೀರಿನ ಅಭಾವ
Homeಸುದ್ದಿಗಳು

ತುಂಗಭದ್ರಾ ಜಲಾಶಯದಲ್ಲಿ ನೀರಿನ ಅಭಾವ

Share
Share

ಬಳ್ಳಾರಿ : ತುಂಗಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಪ್ರಸ್ತುತ ತೀವ್ರ ಮಳೆ ಕೊರತೆ  ಉಂಟಾಗಿರುವುದರಿಂದ ತುಂಗಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ.

ಈ ಹಿನ್ನೆಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆಗಳಿಗೆ ಜಲಾಶಯದ ಬಲದಂಡೆ ಮತ್ತು ಎಡದಂಡೆ ನಾಲೆಗಳಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲ. ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಲು ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತ ಬಾಂಧವರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ.

ಮುಂಬರುವ ದಿನಗಳಲ್ಲಿ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಜಲಾಶಯ ಭರ್ತಿಯಾದಲ್ಲಿ, ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಯೋಜಿಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಈ ಕುರಿತು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಅಭಿಯಂತರರಾದ ಎಸ್.ಬಿ. ಮಲ್ಲಿಗವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.