Home ಸುದ್ದಿಗಳು ಪ್ರಾಂಚೈಸಿ ಹುದ್ದೆಗೆ ಆನ್ಲೈನ್ ಅರ್ಜಿ ಅಹ್ವಾನ
ಸುದ್ದಿಗಳು

ಪ್ರಾಂಚೈಸಿ ಹುದ್ದೆಗೆ ಆನ್ಲೈನ್ ಅರ್ಜಿ ಅಹ್ವಾನ

Share
Share

ಬಳ್ಳಾರಿ : ಜಿಲ್ಲಾದ್ಯಂತ ನಾಗರಿಕರಿಗೆ ಉತ್ತಮ ಸೇವೆಗಳನ್ನು ನೀಡುತ್ತಿರುವ ‘ಗ್ರಾಮ ಒನ್’ ಕೇಂದ್ರಗಳ ಪೈಕಿ, ಪ್ರಸ್ತುತ ಖಾಲಿ ಇರುವ ಗ್ರಾಮ ಒನ್ ಕೇಂದ್ರಕ್ಕೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ತಿಳಿಸಿದೆ.

ಸರ್ಕಾರದ ಇ-ಆಡಳಿತ ಇಲಾಖೆಯ ಇಡಿಸಿಎಸ್ ನಿರ್ದೇಶನಾಲಯದ ಸೂಚನೆಯಂತೆ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಜಿಲ್ಲೆಗೆ ಒಟ್ಟು 177 ಗ್ರಾಮ ಒನ್ ಕೇಂದ್ರಗಳು ಮಂಜೂರಾಗಿದ್ದು, ಈ ಪೈಕಿ ಈಗಾಗಲೇ 167 ಕೇಂದ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಉಳಿದ ಕೇಂದ್ರಗಳ ಪೈಕಿ 09 ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಸ್ವೀಕರಿಸಲಾದ ಅರ್ಜಿಗಳು ಸದ್ಯ ಪರಿಶೀಲನಾ ಹಂತದಲ್ಲಿದ್ದು, ಬಾಕಿ ಇರುವ 01 ಕೇಂದ್ರಕ್ಕೆ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಕೇಂದ್ರದ ವಿವರ:
ಸಂಡೂರು ತಾಲ್ಲೂಕಿನ ನರಸಿಂಗಪುರ ಗ್ರಾಮ ಪಂಚಾಯಿತಿ. ಖಾಲಿ ಇರುವ ಗ್ರಾಮ ಒನ್ ಕೇಂದ್ರದಸಂಪೂರ್ಣ ವಿವರಗಳನ್ನು https://sevasindhuservices.karnataka.gov.in/directApply.do?serviceld=2631 ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಆಸಕ್ತರು ಅಧಿಕೃತ ಲಿಂಕ್ ಬಳಸಿ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಡೂರು ತಹಶೀಲ್ದಾರರ ಕಚೇರಿ ಅಥವಾ ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Homeಸುದ್ದಿಗಳು

ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : 2026ನೇ ಸಾಲಿಗೆ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟು ಜಿಲ್ಲಾ ಮಟ್ಟದ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.