Home ಸಾರಿಗೆ ಬಸ್ ನಿಲುಗಡೆಗೆ ಆಗ್ರಹಿಸಿ ಮನವಿ
Homeಶಿಕ್ಷಣ

ಸಾರಿಗೆ ಬಸ್ ನಿಲುಗಡೆಗೆ ಆಗ್ರಹಿಸಿ ಮನವಿ

Share
Share

ಹರಪನಹಳ್ಳಿ : ತಾಲ್ಲೂಕಿನ ಬಾಗಳಿ, ಶೃಂಗಾರತೋಟ, ಹಾಗೂ ದಡಿಗಾರನಹಳ್ಳಿ ಗ್ರಾಮಗಳ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗಾಗಿ ಸಾರಿಗೆ ಬಸ್‍ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿ ಸಾರಿಗೆ ಘಟಕಕ್ಕೆ ಮನವಿ ಸಲ್ಲಿಸಿದ್ದಾರೆ.

ಶಿವಮೊಗ್ಗ ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲ ಸಾರಿಗೆ ಬಸ್‍ ನಿಲುಗಡೆ ಮಾಡಬೇಕು. ಬಾಗಳಿ, ಶೃಂಗಾರತೋಟ, ದಡಿಗಾರನಹಳ್ಳಿ, ಕಾಯಕದಹಳ್ಳಿ ಮಾರ್ಗವಾಗಿ ಹರಪನಹಳ್ಳಿಗೆ ಸಾರಿಗೆ ಬಸ್‍ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಶೃಂಗಾರತೋಟ, ಬಾಗಳಿ ಹಾಗೂ ದಡಿಗಾರನಹಳ್ಳಿ ಗ್ರಾಮಗಳಿಗೆ ನಿರಂತರ ಸಾರಿಗೆ ಸಂಪರ್ಕ ಕಲ್ಪಿಸಬೇಕು. ಹರಪನಹಳ್ಳಿ-ಹೊಸಪೇಟೆ ಮಾರ್ಗದಲ್ಲಿ ಚಲಿಸುವ ಬಸ್‌ಗಳಿಗೆ ಗ್ರಾಮಗಳ ಸಮೀಪ ಕಡ್ಡಾಯ ನಿಲುಗಡೆ ನೀಡಬೇಕು. ಪ್ರಯಾಣಿಕರ ಅನುಕೂಲಕ್ಕಾಗಿ ಸೂಕ್ತ ಸ್ಥಳ ಗುರುತಿಸಿ ತಕ್ಷಣವೇ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು. ಪ್ರಶಾಂತ, ಬಸವರಾಜ್ ಹಾಗೂ ವಿದ್ಯಾರ್ಥಿಗಳಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.