Home ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಚುರುಕು: ಶೇ 95.11 ಪ್ರಗತಿ
Homeಸುದ್ದಿಗಳು

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಚುರುಕು: ಶೇ 95.11 ಪ್ರಗತಿ

Share
ಎಸ್‌ಆರ್‌ಐ
Share

ಹೊಸಪೇಟೆ : ವಿಜಯನಗರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಈವರೆಗೆ ಒಟ್ಟು 10,86,898 ನಮೂನೆಗಳ ವಿತರಣೆ ಮಾಡುವ ಮೂಲಕ ಶೇ 95.11 ಪ್ರಗತಿ ಸಾಧಿಸಿದೆ.

ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಪ್ರಸ್ತುತ ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಒಟ್ಟು 11,42,732 ಮತದಾರರಿದ್ದು. ಈಗಾಗಲೇ ಶೇ. 94 ರಷ್ಟು ಮತದಾರರ ಮ್ಯಾಪಿಂಗ್ ಕರ‍್ಯ ಪರ‍್ಣಗೊಂಡಿದೆ.

ಜೂನ್ 30 ರಿಂದ ಅಭಿಯಾನ ಪ್ರಾರಂಭವಾಗಿದ್ದು, ಜುಲೈ 29 ರವರೆಗೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಹಾಗೂ ಡಿಜಿಟಲೀಕರಣ ಪ್ರಕ್ರಿಯೆ ನಡೆಯಲಿದೆ. ವಿತರಿಸಲಾದ ಗಣತಿ ನಮೂನೆಗಳ ಪೈಕಿ ಒಟ್ಟು 71,306 (ಶೇ 6.24) ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ. ಇದಲ್ಲದೆ, 806 ಮತದಾರರು ಸ್ವತಃ ಆನ್‌ಲೈನ್ ಮೂಲಕ ನಮೂನೆಗಳನ್ನು ಸಲ್ಲಿಸಿದ್ದಾರೆ.

ಬಿಎಲ್‌ಒಗಳ ಪರಿಶೀಲನೆ ವೇಳೆ ಜಿಲ್ಲೆಯಲ್ಲಿ 668 ಮೃತ ಮತದಾರರು ಹಾಗೂ ಖಾಯಂ ಆಗಿ ಸ್ಥಳಾಂತರಗೊಂಡಿರುವ 343 ಮತದಾರರರನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಮನವಿ ಮಾಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.