Home ಪೋಷಕತ್ವ ಯೋಜನೆ ಅರ್ಜಿ ಆಹ್ವಾನ
Homeಆರೋಗ್ಯ

ಪೋಷಕತ್ವ ಯೋಜನೆ ಅರ್ಜಿ ಆಹ್ವಾನ

Share
Share

ವಿಜಯನಗರ (ಹೊಸಪೇಟೆ) : 2026-27ನೇ ಸಾಲಿಗೆ ಮಕ್ಕಳ ಪಾಲನೆ ಮತ್ತು ರಕ್ಷಣೆ ಅನ್ವಯ, ಜಿಲ್ಲೆಯ ವಿವಿಧ ಕಾರಣಗಳಿಂದ ವಂಚಿತರಾದ ಮಕ್ಕಳಿಗೆ ಕುಟುಂಬದ ವಾತಾವರಣ ಒದಗಿಸುವ ಮಹತ್ವಾಕಾಂಕ್ಷೆಯ ‘ಪೋಷಕತ್ವ ಮತ್ತು ಗುಂಪು ಪೋಷಕತ್ವ’ ಕಾರ್ಯಕ್ರಮದಡಿ ಅರ್ಹ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಸರ್ಕಾರಿ ಬಾಲಮಂದಿರ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮಕ್ಕಳ ಪಾಲನಾ ಕೇಂದ್ರಗಳಲ್ಲಿ ದೀರ್ಘಾವಧಿಯಿಂದ ಪುನರ್ವಸತಿಗೊಂಡು, ಪೋಷಕರು ಭೇಟಿ ನೀಡದ ಅಥವಾ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗದ ಮತ್ತು ದತ್ತು ಸ್ವೀಕಾರಕ್ಕೆ ಒಳಪಡಲು ಸಾಧ್ಯವಿಲ್ಲದ 07 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಪರ್ಯಾಯ ಕುಟುಂಬ ವ್ಯವಸ್ಥೆಯನ್ನು ಕಲ್ಪಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಮಕ್ಕಳನ್ನು ಸಾಂಸ್ಥಿಕ ಸೇವೆಗೆ ಒಳಪಡಿಸುವುದನ್ನು ತಪ್ಪಿಸಿ, ಅವರಿಗೆ ಕೌಟುಂಬಿಕ ಪ್ರೀತಿ ಮತ್ತು ಕಾಳಜಿಯನ್ನು ನೀಡುವುದು ಇದರ ಆಶಯವಾಗಿದೆ. ಮಾರಣಾಂತಿಕ ಕಾಯಿಲೆ, ತೀವ್ರ ಅನಾರೋಗ್ಯ, ಪೋಷಕರ ಸಾವು ಅಥವಾ ವಿಶೇಷ ಚೇತನವುಳ್ಳ ಹಾಗೂ ಅಪಾಯದ ಅಂಚಿನಲ್ಲಿರುವ ಮಕ್ಕಳಿಗೆ ತಾತ್ಕಾಲಿಕ ಹಾರೈಕೆ ನೀಡಲು ಇಚ್ಛಿಸುವ ವಿಸ್ತೃತ ಕುಟುಂಬದ ಸದಸ್ಯರು ಅಥವಾ ಅಸಂಬಂಧಿತ ವ್ಯಕ್ತಿಗಳು ಮತ್ತು ಕುಟುಂಬಗಳು ಅರ್ಜಿ ಸಲ್ಲಿಸಬಹುದು.

ಮಗುವಿನ ಆಗತ್ಯತೆಯ ಆಧಾರದ ಮೇಲೆ ಅಲ್ಪಾವಧಿಯ ಪೋಷಕತ್ವದಲ್ಲಿ ಆವಧಿಯು 01 ವರ್ಷಕ್ಕಿಂತ ಹೆಚ್ಚಿನ ಅವಧಿಯಾಗಿರತಕ್ಕದ್ದಲ್ಲ ಅಥವಾ ದೀರ್ಘಾವಧಿಯು ಪೋಷಕತ್ವದ ಅವಧಿಯು 01 ವರ್ಷಕ್ಕಿಂತ ಹೆಚ್ಚಿನ ಅವಧಿಗೆ ಇರತಕ್ಕದ್ದು, ಮಗು ಮತ್ತು ಸಾಕು ಕುಟುಂಬದ ನಡುವಿನ ಹೊಂದಾಣಿಕೆಯ ಮೌಲ್ಯಮಾಪನದ ಆಧಾರದ ಮೇಲೆ ಮಗುವಿಗೆ 18 ವರ್ಷ ತುಂಬುವವರೆಗೆ ಬಾಲನ್ಯಾಯ ಸಮಿತಿಯು ನಿಯತಕಾಲಿಕವಾಗಿ ಈ ಅವಧಿಯನ್ನು ವಿಸ್ತರಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಪ್ತಗಿರಿ ಶಾಲೆ ಹತ್ತಿರ ಬಸವೇಶ್ವರ ಬಡಾವಣೆ 16ನೇ ವಾರ್ಡ್ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದೂರವಾಣಿ ಸಂಖ್ಯೆ: 08394-200091, ಮಕ್ಕಳ ರಕ್ಷಣಾಧಿಕಾರಿಗಳು ದೂರವಾಣಿ ಸಂಖ್ಯೆ: 8105603685 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.