Home ಬಿಡ್‌ದಾರರಿಗೆ ತರಬೇತಿ ಕಾರ್ಯಗಾರ
Homeಸುದ್ದಿಗಳು

ಬಿಡ್‌ದಾರರಿಗೆ ತರಬೇತಿ ಕಾರ್ಯಗಾರ

Share
Share

ವಿಜಯನಗರ(ಹೊಸಪೇಟೆ) :  ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ಭಾರತೀಯ ಮದ್ಯ ಅಥವಾ ವಿದೇಶಿ ಮದ್ಯ ಅಥವಾ ಎರಡನ್ನೂ ಮಾರಾಟ ಮಾಡಲು ಅರ್ಹ ಹೆಚ್-1 ಬಿಡ್‌ದಾರರಿಗೆ ಸಿ.ಎಲ್-2ಎ ಮತ್ತು ಸಿ.ಎಲ್-9ಎ ನಮೂನೆಗಳಲ್ಲಿ ಖಾಲಿ ಇರುವ ಅಥವಾ ಲಭ್ಯವಿರುವ ಅಬಕಾರಿ ಸನ್ಮದುಗಳನ್ನು ನೀಡಲು ಅಬಕಾರಿ ಇಲಾಖೆಯು ಬಿಡ್ಡರ್‌ಗಳಿಂದ ಬಿಡ್ ಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲೆಗೆ ಒಟ್ಟು 10 ಸಿ.ಎಲ್-2ಎ ಸನ್ನದುಗಳನ್ನು ಹಂಚಿಕೆ ಮಾಡಿದ್ದು, ಅದರಲ್ಲಿ ಹೆಚ್.ಬಿ.ಹಳ್ಳಿ ಸಿ.ಎಲ್-2ಎ 02, ಹಡಗಲಿ ಸಿ.ಎಲ್-2ಎ 02, ಹರಪನಹಳ್ಳಿ ಸಿ.ಎಲ್-2ಎ 01, ಹೊಸಪೇಟೆ ಸಿ.ಎಲ್-2ಎ 03 ಮತ್ತು ಕೂಡ್ಲಿಗಿ ಸಿ.ಎಲ್- 2ಎ 02 ಎಲ್ಲಾ ಸನ್ನದುಗಳು ಸಾಮಾನ್ಯ ಮೀಸಲಾತಿಗೆ ಹಂಚಿಕೆ ಮಾಡಲಾಗಿದೆ.

ಆದ್ದರಿಂದ ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು,ಜುಲೈ 6 ರಿಂದ 14 ರವರೆಗೆ ಸಂಭಾವ್ಯ ಬಿಡ್‌ದಾರರಿಗೆ ತರಬೇತಿ ಹಾಗೂ ಜುಲೈ 24 ರಿಂದ 31 ರವರೆಗೆ ನೇರ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜುಲೈ 13 ರಂದು ಬೆಳಗ್ಗೆ 11 ಗಂಟೆಗೆ ಬಳ್ಳಾರಿ ಜಿಲ್ಲಾ ಪಂಚಾಯತ್ ಕಛೇರಿಯ ನೂತನ ನಜೀರ್ ಸಾಬ್ ಸಭಾಂಗಣದಲ್ಲಿ ತರಬೇತಿ ಕಾರ್ಯಗಾರ ಆಯೋಜಿಸಲಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8762342678, 08394-200250ಗೆ ಸಂಪರ್ಕಿಸಬಹುದು ಎಂದು ಅಬಕಾರಿ ಇಲಾಖೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.