Home ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ:ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ
Homeಸುದ್ದಿಗಳು

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ:ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ

Share
Share

ದಾವಣಗೆರೆ :  ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆೆ ಎಸ್.ಐ.ಆರ್ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದ್ದು ಮತದಾರರ ಸಹಾಯಕ್ಕಾಗಿ ಸೌಲಭ್ಯ ಕೇಂದ್ರಗಳನ್ನು ಒದಗಿಸಲಾಗಿದ್ದು ಸಂಶಯ ಹಾಗೂ ಹೆಚ್ಚಿನ ಮಾಹಿತಿ ಇಲ್ಲಿಂದ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಗುರುವಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಭಂದ ತೆರೆಯಲಾಗಿರುವ ಮತದಾರರ ನೋಂದಣಿ ಸೌಲಭ್ಯ (ಸಹಾಯ) ಕೇಂದ್ರಗಳಾದ ಎಂ.ಸಿ.ಸಿ ಎ. ಬ್ಲಾಕ್‌ನ ಮಹಾನಗರ ಪಾಲಿಕೆ ಕಚೇರಿ, ವಿನಾಯಕ ಬಡಾವಣೆ ಸರ್ಕಾರಿ ಪ್ರಾಥಮಿಕ ಶಾಲೆ, ದುಡಾ ಕಚೇರಿ ಮತ್ತು ದೇವರಾಜು ಅರಸು ಬಡಾವಣೆ ಬಿ. ಬ್ಲಾಕ್ ವಿಕಲಚೇತರ ಶಾಲೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಎಸ್.ಬಿ.ಎಸ್ ನಗರ ಸರ್ಕಾರಿ ಪ್ರಾಥಮಿಕ ಶಾಲಾ ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರು ಮತ್ತು ಬಿ.ಎಲ್.ಓ ಗಳನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿ ಮತದಾರರ ಮನೆಗೆ ಕಡ್ಡಾಯವಾಗಿ 3 ಭಾರಿ ಮತಗಟ್ಟೆ ಅಧಿಕಾರಿ ಬಿ.ಎಲ್.ಓ ಭೇಟಿ ನೀಡುವರು. ಮತದಾರರು ಸ್ಥಳದಲ್ಲಿ ಲಭ್ಯವಿಲ್ಲದಿದ್ದರೆ, ಅವರ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಮಾಹಿತಿ ನೀಡಿ, ಮನೆಯಲ್ಲಿ ಇಲ್ಲದಿರುವ ಸಂದರ್ಭದಲ್ಲಿ ಮನೆಯ ಬಾಗಿಲಿನ ಮೇಲೆ ಕಡ್ಡಾಯವಾಗಿ ಸ್ಟಿಕ್ಕರ್ ಅಂಟಿಸಿ, ಮತಗಟ್ಟೆ ಅಧಿಕಾರಿ ಯಾವ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ಮತದಾರರಿಗೆ ಕಡ್ಡಾಯವಾಗಿ ನೀಡಬೇಕು.

ಮತದಾರರು ಅವರು ನಿಯೋಜಿತ ಸ್ಥಳದಲ್ಲಿ ವಾಸಿಸುತ್ತಿಲ್ಲ ಎಂಬುದು ದೃಢಪಟ್ಟರೆ, ಅಂತಹವರನ್ನು ‘ಅಲಭ್ಯ’ ಎಂದು ಗುರುತಿಸಿ ವರದಿಯಲ್ಲಿ ದಾಖಲಿಸಿ ಎಂದು ಮತಗಟ್ಟೆ ಅಧಿಕಾರಿಗಳಿಗೆ ತಿಳಿಸಿದರು.
ಒಂದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಮನೆ ಬದಲಾಯಿಸಿರುವ ಮತದಾರರು ತಮ್ಮ ಹೆಸರು ಕೈಬಿಟ್ಟು ಹೋಗುವ ಆತಂಕ ಪಡಬೇಕಾಗಿಲ್ಲ, ಅಂತಹ ಮತದಾರರು ನಮೂನೆ-8′ ಸಲ್ಲಿಸುವ ಮೂಲಕ ಸುಲಭವಾಗಿ ತಮ್ಮ ಹೊಸ ವಿಳಾಸವನ್ನು ನವೀಕರಿಸಿಕೊಳ್ಳಬಹುದು ಎಂದು ಸಾರ್ವಜನಿಕರಿಗೆ ತಿಳಿಸಿದರು.

ನಗರದಲ್ಲಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ನಕಲಿ ಮತದಾರರ ಗುರುತಿನ ಚೀಟಿಗಳನ್ನು  ಹೊಂದಿರುವುದು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಬೇಕು. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗೆ ಧಕ್ಕೆ ತರುವಂತಹ ಯಾವುದೇ ಅಕ್ರಮ ಚಟುವಟಿಕೆಗಳನ್ನು ಜಿಲ್ಲಾಡಳಿತ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.

ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಫಲಾನುಭವಿಗಳ ನಿಖರವಾದ ವಿಳಾಸ ಪತ್ತೆ ಹಚ್ಚುವುದು ಸವಾಲಿನ ಕೆಲಸವಾಗಿದೆ. ಆದಾಗ್ಯೂ, ಬಿ.ಎಲ್.ಓಗಳು ಈ ಸವಾಲನ್ನು ಸಮರ್ಥವಾಗಿ ಎದುರಿಸಿ, ಅರ್ಹರೆಲ್ಲರಿಗೂ ಶೇ 100 ರಷ್ಟು ಗಣತಿ ನಮೂನೆಗಳನ್ನು ತಲುಪಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು.ಈ ವೇಳೆ ಮಹಾನಗರ ಪಾಲಿಕೆ ಆಯುಕ್ತ ಮಹಾಂತೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಹೊಸ ಗೌಡರ್ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.