Home ಎಸ್ಸೆಸ್ಸೆಲ್ಸಿ ಮರುಮೌಲ್ಯಮಾಪನ:  ಕೆಸಿಎ ಶಾಲೆ ವಿದ್ಯಾರ್ಥಿನಿಯರಿಗೆ ರಾಜ್ಯಕ್ಕೆ 1 ಹಾಗೂ 2ನೇ ಸ್ಥಾನ!
Homeಶಿಕ್ಷಣ

ಎಸ್ಸೆಸ್ಸೆಲ್ಸಿ ಮರುಮೌಲ್ಯಮಾಪನ:  ಕೆಸಿಎ ಶಾಲೆ ವಿದ್ಯಾರ್ಥಿನಿಯರಿಗೆ ರಾಜ್ಯಕ್ಕೆ 1 ಹಾಗೂ 2ನೇ ಸ್ಥಾನ!

Share
Share

ಹರಪನಹಳ್ಳಿ: 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಮರು ಮೌಲ್ಯಮಾಪನದಲ್ಲಿ ನಗರದ ಕೆಸಿಎ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅತ್ಯುನ್ನತ ಸಾಧನೆಗೈದಿದ್ದು, ರಾಜ್ಯಕ್ಕೇ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು   ಜಿಲ್ಲೆಗೆ
ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿ ಸುರಭಿ ವಿ.ಎಚ್. ಅವರು ಪರೀಕ್ಷೆ-1ರ ಫಲಿತಾಂಶದಲ್ಲಿ 621 ಅಂಕಗಳನ್ನು ಗಳಿಸಿದ್ದರು. ನಂತರ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದು, ಇದೀಗ ಕನ್ನಡದಲ್ಲಿ 2 ಹಾಗೂ ಹಿಂದಿ ವಿಷಯದಲ್ಲಿ 2 ಅಂಕಗಳನ್ನು ಹೆಚ್ಚುವರಿಯಾಗಿ ಪಡೆದಿದ್ದಾರೆ. ಈ ಮೂಲಕ ಒಟ್ಟು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮತ್ತೋರ್ವ ವಿದ್ಯಾರ್ಥಿನಿ ಪ್ರಾಂಜಲ ಬಿ. ಅವರು ಪರೀಕ್ಷೆ-1ರಲ್ಲಿ 623 ಅಂಕಗಳನ್ನು ಪಡೆದಿದ್ದರು. ಮರು ಮೌಲ್ಯಮಾಪನದಲ್ಲಿ ಇಂಗ್ಲಿಷ್ ವಿಷಯದಲ್ಲಿ 1 ಅಂಕ ಹೆಚ್ಚಾಗುವ ಮೂಲಕ ಒಟ್ಟು 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.