Home ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Homeಕೃಷಿ

ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Share
ಮೀನು ಗಾರಿಕೆ ಇಲಾಖೆ
Share

ವಿಜಯನಗರ(ಹೊಸಪೇಟೆ) : 2026-27 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಉಚಿತ ಮೀನುಗಾರಿಕೆ ಸಲಕರಣೆ ಕಿಟ್, ಮತ್ಸ್ಯ ಯೋಜನೆಯಡಿ ಮೊಪೆಡ್ ಖರೀದಿಗೆ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನವಾಗಿದೆ.

ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಮೀನುಗಾರರಿಗೆ ರೂ.20 ಸಾವಿರ ವೆಚ್ಚದಲ್ಲಿ ಉಚಿತ ಮೀನುಗಾರಿಕೆ ಸಲಕರಣೆ ಕಿಟ್, ಮೀನು ಮಾರುಕಟ್ಟೆಗಳ ನಿರ್ಮಾಣ ಮತ್ತು ಮೀನು ಮಾರಾಟಕ್ಕೆ ಸಹಾಯ ಮತ್ಸ್ಯವಾಹಿನಿ ಯೋಜನೆಯಡಿ ಐಸ್ ಬಾಕ್ಸ್ ನೊಂದಿಗೆ ಮೊಪೆಡ್ ಖರೀದಿಸಲು ಸಹಾಯಧನ ನೀಡಲಾಗುವುದು.

ಜಿಲ್ಲೆಯಲ್ಲಿ ಬರುವ ಗ್ರಾಮ ಪಂಚಾಯಿತಿ ಕೆರೆಗಳಲ್ಲಿ ಮತ್ತು ಹೂವಿನಹಡಗಲಿ ತಾಲ್ಲೂಕಿನ ಸಿಂಗಟಲೂರು ಏತ ನೀರಾವರಿ ಬ್ಯಾರೇಜ್ ಕಂ ಡ್ಯಾಂನ ಹಿನ್ನೀರು ಪ್ರದೇಶದಲ್ಲಿ ಇಲಾಖೆ ನೊಂದಾಯಿತ ಖಾಸಗಿ ಮೀನು ಕೃಷಿಕರಿಂದ ಬಲಿತ ಬಿತ್ತನೆ ಮೀನುಮರಿ ಸರಬರಾಜು ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ಇಲಾಖೆ ವೆಬ್ಸೈಟ್ ವಿಳಾಸ https://vijayanagara.nic.in  ನಲ್ಲಿ ಅಥವಾ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಛೇರಿಯ ಮುಖಾಂತರ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಭಂದಿಸಿದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಮತ್ತು ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.