Home ಸ್ಥಳಾಂತರ, ಮರಣ ಹಾಗೂ ದ್ವಿಪತಿ ಮತದಾರರ ಗುರುತಿಸುವಿಕೆ ಪ್ರಗತಿ :
Homeಸುದ್ದಿಗಳು

ಸ್ಥಳಾಂತರ, ಮರಣ ಹಾಗೂ ದ್ವಿಪತಿ ಮತದಾರರ ಗುರುತಿಸುವಿಕೆ ಪ್ರಗತಿ :

Share
Share

ದಾವಣಗೆರೆ : ಮನೆ ಮನೆ ಭೇಟಿ ಸಂದರ್ಭದಲ್ಲಿ  ಜುಲೈ 16 ರ ವರೆಗೆ ಜಿಲ್ಲೆಯಾದ್ಯಂತ ಒಟ್ಟು 29,291 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 442 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 11,610 ಶಾಶ್ವತ ವಲಸೆ, 11,832 ಮರಣ ಪ್ರಕರಣ, 5284 ದ್ವಿಪ್ರತಿ ನಮೂನೆಗಳು ಹಾಗೂ 123 ಇತರೆ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ.

ಕ್ಷೇತ್ರವಾರು ವಿವರ :
ಜಗಳೂರು ಕ್ಷೇತ್ರದಲ್ಲಿ ಒಟ್ಟು 3211 ಪ್ರಕರಣಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 96 ಸಂಗ್ರಹವಾಗದ, 1491 ಶಾಶ್ವತ ವಲಸೆ, 934  ಮರಣ, 670 ದ್ವಿಪ್ರತಿ ಹಾಗೂ 20 ಇತರೆ ಪ್ರಕರಣಗಳಿವೆ.

ಹರಿಹರ ಕ್ಷೇತ್ರದಲ್ಲಿ ಒಟ್ಟು 4274 ಪ್ರಕರಣಗಳು ಪತ್ತೆಯಾಗಿದ್ದು, 37 ಸಂಗ್ರಹವಾಗದ, 1241 ಶಾಶ್ವತ ವಲಸೆ, 1952 ಮರಣ, 1030 ದ್ವಿಪ್ರತಿ ಮತ್ತು 14 ಇತರೆ ಪ್ರಕರಣಗಳಿವೆ.

ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಒಟ್ಟು 3277 ಪ್ರಕರಣಗಳಿದ್ದು, 29 ಸಂಗ್ರಹವಾಗದ, 1045 ಶಾಶ್ವತ ವಲಸೆ, 1676 ಮರಣ, 508 ದ್ವಿಪ್ರತಿ ಹಾಗೂ 19 ಇತರೆ ಪ್ರಕರಣಗಳಿವೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2824 ಪ್ರಕರಣಗಳಿದ್ದು, 78 ಸಂಗ್ರಹವಾಗದ, 731 ಶಾಶ್ವತ ವಲಸೆ, 1100 ಮರಣ, 896 ದ್ವಿಪ್ರತಿ ಹಾಗೂ 19 ಇತರೆ ಪ್ರಕರಣಗಳಿವೆ.

ಮಾಯಕೊಂಡ ಕ್ಷೇತ್ರದಲ್ಲಿ ಒಟ್ಟು 6977 ಪ್ರಕರಣಗಳಿದ್ದು, 110  ಸಂಗ್ರಹವಾಗದ, 2854 ಶಾಶ್ವತ ವಲಸೆ, 2958 ಮರಣ, 1032 ದ್ವಿಪ್ರತಿ ಹಾಗೂ 23 ಇತರೆ ಪ್ರಕರಣಗಳಿವೆ.

ಚನ್ನಗಿರಿ ಕ್ಷೇತ್ರದಲ್ಲಿ ಜಿಲ್ಲೆಯಲ್ಲೇ 3895 ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 55  ಸಂಗ್ರಹವಾಗದ, 1850 ಶಾಶ್ವತ ವಲಸೆ, 1299  ಮರಣ, 671 ದ್ವಿಪ್ರತಿ ಹಾಗೂ 20 ಇತರೆ ಪ್ರಕರಣಗಳು ಸೇರಿವೆ.

ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 4833  ಪ್ರಕರಣಗಳನ್ನು ಗುರುತಿಸಲಾಗಿದ್ದು, ಇದರಲ್ಲಿ 37 ಸಂಗ್ರಹವಾಗದ, 2398 ಶಾಶ್ವತ ವಲಸೆ, 1913 ಮರಣ, 477 ದ್ವಿಪ್ರತಿ ಹಾಗೂ 08 ಇತರೆ ಪ್ರಕರಣಗಳು ಒಳಗೊಂಡಿವೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ
ಚುನಾವಣಾಧಿಕಾರಿ ಜಿ ಎಂ ಗಂಗಾಧರಸ್ವಾಮಿ ಅವರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.