Home ಮೃತರ ಖಾತೆಗೆ ಗೃಹಲಕ್ಷ್ಮಿ ಹಣ: ತಡೆಗೆ ಸೂಚನೆ
Homeಸುದ್ದಿಗಳು

ಮೃತರ ಖಾತೆಗೆ ಗೃಹಲಕ್ಷ್ಮಿ ಹಣ: ತಡೆಗೆ ಸೂಚನೆ

Share
Share

ವಿಜಯನಗರ (ಹೊಸಪೇಟೆ) : ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಅವರ ಖಾತೆಗಳಿಗೆ ನಿಯಮಾನುಸಾರ ಜಮೆಯಾಗಿರುವ ಅನುದಾನವನ್ನು ತಕ್ಷಣವೇ ತಡೆಯಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ ಶಿವಮೂರ್ತಿ ಹೇಳಿದರು.

ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಹಯೋಗದೊಂದಿಗೆ ಬುಧವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗೃಹಲಕ್ಷ್ಮಿ ಹಣವನ್ನು ಸರ್ಕಾರಕ್ಕೆ ಮರುಪಾವತಿಸಲು ವಿವಿಧ ಇಲಾಖೆಗಳು ಪರಸ್ಪರ ಸಮನ್ವಯ ಸಾಧಿಸಬೇಕು.

ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳ ಮರು ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪರಿಶೀಲನಾ ಸಭೆಯಲ್ಲಿ ಮರು ಸಮೀಕ್ಷೆಯ ಅರ್ಜಿ ಬಿಡುಗಡೆಗೊಳಿಸಿದ ಅವರು, ಈ ಕಾರ್ಯವನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಸಂಬಂದಿತ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ 3 ವರ್ಷಗಳನ್ನು ಪೂರ್ಣಗೊಳಿಸಿದ ನೆನಪಿಗಾಗಿ ಜಿಲ್ಲಾ ಪಂಚಾಯತಿ ಆವರಣದಲ್ಲಿ ಸಸಿ ನೆಡಲಾಯಿತು. ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಕೆ.ಬದಾವಲಿ, ಚಂದ್ರಪ್ಪ ಹುಲಿಕಟ್ಟೆ, ಕೆ. ಎಸ್.ಶಾಂತನಗೌಡ, ಹೆಚ್ ಜಾಂಡಿಸಾಹೇಬ್, ಜಿ. ಪಂ. ಮುಖ್ಯ ಯೋಜನಾಧಿಕಾರಿ ಅನ್ನದಾಸ್ವಾಮಿ, ವಿವಿಧ ತಾಲ್ಲೂಕಿನ ಅನುಷ್ಠಾನ ಸಮಿತಿ ಅಧ್ಯಕ್ಷರು, ಸದಸ್ಯರು ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.