Home ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ
Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

Share
Share

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಈವರೆಗೆ ಒಟ್ಟು 11,42,732 ಇ ಫಾರ್ಮ್ ನಮೂನೆಗಳನ್ನು ಒಟ್ಟು 1234 ಮತಗಟ್ಟೆ ಮಟ್ಟದ ಅಧಿಕಾರಿಗಳು ಶೇ.100 ರಷ್ಟು ಗಣತಿ ನಮೂನೆಗಳ ವಿತರಿಸಿದ್ದಾರೆ.

ಜೂನ್ 30 ರಿಂದ ಅಭಿಯಾನ ಪ್ರಾರಂಭವಾಗಿದ್ದು, ಆಗಸ್ಟ್ 8 ರವರೆಗೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಹಾಗೂ ಡಿಜಿಟಲೀಕರಣ ಪ್ರಕ್ರಿಯೆ ನಡೆಯಲಿದೆ. ವಿತರಿಸಲಾದ ಗಣತಿ ನಮೂನೆಗಳ ಪೈಕಿ ಒಟ್ಟು 893011 (ಶೇ.78.15) ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ. ಇದಲ್ಲದೆ 2852 (ಶೇ. 0.25) ಮತದಾರರು ಸ್ವತಃ ಆನ್ಲೈನ್ ಮೂಲಕ

ನಮೂನೆಗಳನ್ನು ಸಲ್ಲಿಸಿದ್ದಾರೆ. ಬಿಎಲ್‌ಒಗಳ ಪರಿಶೀಲನೆ ವೇಳೆ ಜಿಲ್ಲೆಯಲ್ಲಿ 21517 ಮೃತ ಮತದಾರರು ಹಾಗೂ ಖಾಯಂ ಆಗಿ ಸ್ಥಳಾಂತರಗೊಂಡಿರುವ 22204 ಮತದಾರರರನ್ನು ಗುರುತಿಸಲಾಗಿದೆ. ಅದಷ್ಟೇ ಅಲ್ಲದೇ ಈಗಾಗಲೇ 8490 ದಾಖಲಾಗಿರುವವರು ಹಾಗೂ 604 ಜನ ಸಂಪರ್ಕಕ್ಕೆ ಸಿಗದ ಅಥವಾ ಅಲಭ್ಯವಿರುವ ಮತದಾರರನ್ನು ಗುರುತಿಸಿ ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.