Home ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

Share
Share

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ ಹಾಗೂ ಮನೆಗಳನ್ನು ಕಳೆದುಕೊಂಡು ತ್ಯಾಗ ಮಾಡಿದ ಗ್ರಾಮಸ್ಥರ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ ಶಾಸಕ ಹೆಚ್.ಆರ್. ಗವಿಯಪ್ಪ ಹೇಳಿದರು.

ನಗರದ ಅನಂತಶಯನಗುಡಿ ಹತ್ತಿರ ಶುಕ್ರವಾರ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಮನೆ ಕಳೆದುಕೊಂಡವರಿಗೆ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು. . ಸ್ವಂತ ಮನೆಯನ್ನು ತೆರವುಗೊಳಿಸುವುದು ಸಣ್ಣ ವಿಷಯವಲ್ಲ. ದೆಹಲಿಯಲ್ಲಿ ಮಕ್ಕಳಿಗೆ ಪೆಟ್ಟು ಬಿದ್ದರೆ ತಾಯಂದಿರಿಗೆ ಎಷ್ಟೋ ನೋವಾಗುತ್ತದೆಯೋ, ಕಟ್ಟಿಸಿದ ಮನೆ ಒಡೆದಾಗಲೂ ಅಷ್ಟೇ ನೋವಾಗುತ್ತದೆ.

ಆದಾಗ್ಯೂ, ಊರಿನ ಅಭಿವೃದ್ಧಿ ಹಿತದೃಷ್ಟಿಯಿಂದ ಜಾಗ ಬಿಟ್ಟುಕೊಟ್ಟು ದೊಡ್ಡ ಮನಸ್ಸು ಮಾಡಿದ್ದೀರಿ ಎಂದು ಗ್ರಾಮಸ್ಥರ ತ್ಯಾಗವನ್ನು ಸ್ಮರಿಸಿದರು. ಸಂತ್ರಸ್ತರಿಗೆ ನೀಡಲಾಗಿರುವ ಜಾಗದಲ್ಲಿ ಲೇಔಟ್ ಅಭಿವೃದ್ಧಿ, ಚರಂಡಿ ವ್ಯವಸ್ಥೆ (ಡ್ರೈನೇಜ್) ಹಾಗೂ ರಸ್ತೆ ಕಾಮಗಾರಿಗಳನ್ನು ತಕ್ಷಣವೇ ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಂತ್ರಸ್ತರಿಗೆ ಸಿಗಬೇಕಾದ ಹಣಕಾಸಿನ ನೆರವು ಹಾಗೂ ವಸತಿ ಮಂಡಳಿಯಿಂದ (ಹೌಸಿಂಗ್ ಬೋರ್ಡ್) ಹೆಚ್ಚುವರಿ ಮನೆಗಳನ್ನು ಮಂಜೂರು ಮಾಡಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ನಿಯೋಗದೊಂದಿಗೆ ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು. ಕಳೆದ ಮೂರು ವರ್ಷಗಳ ಈ ಸುದೀರ್ಘ ಪ್ರಯತ್ನದಲ್ಲಿ ಅಧಿಕಾರಿಗಳ ತಂಡದ ಶ್ರಮ ಶ್ಲಾಘನೀಯ ಎಂದರು.

ಉಪವಿಭಾಗಾಧಿಕಾರಿ ವಿವೇಕಾನಂದ ಮಾತನಾಡಿ, ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಆನಂದಶಯನಗುಡಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯಿಂದಾಗಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, ಶಾಸಕರ ಶ್ರಮದಿಂದ ಅಂತಿಮ ರೂಪ ಪಡೆದುಕೊಂಡಿದೆ. ಸಂತ್ರಸ್ತರಿಗೆ ಕೇವಲ ಪರಿಹಾರ ಧನಕ್ಕೆ ಕಾಯಿಸದೆ, ಅವರಿಗೆ ತಕ್ಷಣವೇ ನಿವೇಶನಗಳನ್ನು ಗುರುತಿಸಿ, ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಅಗತ್ಯ ಲೇಔಟ್ ಪ್ಲಾನ್ ಸಿದ್ಧಪಡಿಸಿ ಒಟ್ಟು 48 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಕ್ಕುಪತ್ರ ಪಡೆದ ಫಲಾನುಭವಿಗಳು ಕಡ್ಡಾಯವಾಗಿ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಂಡು ‘ಫಾರ್ಮ್-3’ ಪಡೆದುಕೊಳ್ಳಬೇಕು. ಹಕ್ಕು ಪತ್ರ ಪಡೆದ 48 ಫಲಾನುಭವಿಗಳ ನೋಂದಣಿ ಪ್ರಕ್ರಿಯೆಯನ್ನು ಒಂದೇ ದಿನ ಪೂರ್ಣಗೊಳಿಸಲು ಆಗಸ್ಟ್ ತಿಂಗಳ 3ನೇ ವಾರದಲ್ಲಿ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ಸ್ಲಾಟ್ ಬುಕ್ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ತಹಶೀಲ್ದಾರ್ ಶೃತಿ. ಎಂ , ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್, , ನಗರಸಭೆ 7ನೇ ವಾರ್ಡ್ ಸದಸ್ಯರಾದ ಕನಕಮ್ಮ, ಡಿ ವೈ ಎಸ್ ಪಿ ಮುರಳೀಧರ ಮುಖಂಡರಾದ ತಿಪ್ಪೇಸ್ವಾಮಿ, ಅಯ್ಯಾಳಿ ವೆಂಕಟಸ್ವಾಮಿ, ಅಂಜಿನಪ್ಪ ಸೇರಿದಂತೆ
ಮತ್ತಿತರರು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಶೇ.100 ಇ-ಫಾರ್ಮ್ ವಿತರಣೆ ಪೂರ್ಣ

ವಿಜಯನಗರ (ಹೊಸಪೇಟೆ)  : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.