Home ಜುಲೈ 29 ರಂದು ಶಿವಶರಣ ಹಡಪದ ಅಪ್ಪಣ್ಣನವರ ಜಯಂತೋತ್ಸವ
Homeಸುದ್ದಿಗಳು

ಜುಲೈ 29 ರಂದು ಶಿವಶರಣ ಹಡಪದ ಅಪ್ಪಣ್ಣನವರ ಜಯಂತೋತ್ಸವ

Share
Share

ವಿಜಯನಗರ(ಹೊಸಪೇಟೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ವತಿಯಿಂದ ಜುಲೈ 29 ರಂದು ಬೆಳಗ್ಗೆ 11 ಗಂಟೆಗೆ ನಗರದ ಅನಂತಶನಯನಗುಡಿ ರಾಯಣ್ಣ ಕಾಲೋನಿ ಹತ್ತಿರ ಶಿವಶರಣ ಹಡಪದ ಅಪ್ಪಣ್ಣನವರ ಜಯಂತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಪಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಪ್ರಕೃತಿ ವಿಕೋಪಗಳ ಮೇಲುಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ ನಾಯ್ಕ್ ಘನ ಉಪಸ್ಥಿತಿ ವಹಿಸುವರು. ಶಾಸಕರು ಹೆಚ್.ಆರ್. ಗವಿಯಪ್ಪ
ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅಥಿತಿಗಳಾಗಿ ಬಳ್ಳಾರಿ ಸಂಸದರಾದ ಈ.ತುಕಾರಾಮ್, ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ್, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹಡಗಲಿ ಶಾಸಕ ಎಲ್.ಕೃಷ್ಣ ನಾಯಕ್, ಹರಪನಹಳ್ಳಿ ಶಾಸಕಿಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ ಬಿ. ಪಾಟೀಲ್, ಶಶೀಲ್ ಜಿ. ನಮೋಶಿ, ವೈ.ಎಂ. ಸತೀಶ್, ನಗರಸಭೆ ಅಧ್ಯಕ್ಷರು ಎನ್.ರೂಪೇಶ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹೆಚ್.ಎನ್.ಎಫ್. ಇಮಾಮ್ ನಿಯಾಜಿ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಕೆ.ಶಿವಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮಹಮ್ಮದ್ ಅಲಿ ಅಕ್ರಂ ಷಾ ಭಾಗವಹಿಸುವರು. ಹಿಟ್ನಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾದ್ಯಾಪಕ ಡಾ. ಟಿ.ಹೆಚ್.ಬಸವರಾಜ ಉಪನ್ಯಾಸ ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಸಿದ್ದಲಿಂಗೇಶ ರಂಗಣ್ಣವರ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.