ವಿಜಯನಗರ (ಹೊಸಪೇಟೆ) : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಈವರೆಗೆ ಒಟ್ಟು 11,42,732 ಇ ಫಾರ್ಮ್ ನಮೂನೆಗಳನ್ನು ಒಟ್ಟು 1234 ಮತಗಟ್ಟೆ ಮಟ್ಟದ ಅಧಿಕಾರಿಗಳು ಶೇ.100 ರಷ್ಟು ಗಣತಿ ನಮೂನೆಗಳ ವಿತರಿಸಿದ್ದಾರೆ. ಜೂನ್ 30 ರಿಂದ ಅಭಿಯಾನ ಪ್ರಾರಂಭವಾಗಿದ್ದು, ಆಗಸ್ಟ್ 8
ರವರೆಗೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಹಾಗೂ ಡಿಜಿಟಲೀಕರಣ ಪ್ರಕ್ರಿಯೆ ನಡೆಯಲಿದೆ.
ವಿತರಿಸಲಾದ ಗಣತಿ ನಮೂನೆಗಳ ಪೈಕಿ ಒಟ್ಟು 960465 (ಶೇ.84.05) ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣ ಗೊಳಿಸಲಾಗಿದೆ. ಇದಲ್ಲದೆ 2982 (ಶೇ.0.26) ಮತದಾರರು ಸ್ವತಃ ಆನ್ಲೈನ್ ಮೂಲಕ ನಮೂನೆಗಳನ್ನು ಸಲ್ಲಿಸಿದ್ದಾರೆ. ಬಿಎಲ್‌ಒಗಳ ಪರಿಶೀಲನೆ ವೇಳೆ ಜಿಲ್ಲೆಯಲ್ಲಿ 32110 ಮೃತ ಮತದಾರರು ಹಾಗೂ ಖಾಯಂ ಆಗಿ ಸ್ಥಳಾಂತರಗೊಂಡಿರುವ 44185 ಮತದಾರರರನ್ನು ಗುರುತಿಸಲಾಗಿದೆ.
ಅದಷ್ಟೇ ಅಲ್ಲದೇ ಈಗಾಗಲೇ 14065 ದಾಖಲಾಗಿರುವವರು ಹಾಗೂ 6326 ಜನ ಸಂಪರ್ಕಕ್ಕೆ ಸಿಗದ ಅಥವಾ ಅಲಭ್ಯವಿರುವ ಮತದಾರರನ್ನು ಗುರುತಿಸಿ ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದ್ದಾರೆ.
Leave a comment