ವಿಜಯನಗರ(ಹೊಸಪೇಟೆ) : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 31ರಂದು ಬೆಳಿಗ್ಗೆ 10ಗಂಟೆಗೆ ನಗರದ ಎಂಪಿ ಪ್ರಕಾಶ್ ನಗರ, ಶಂಕರ ಕಾಲೋನಿಯ ಭಾರತ್ ಫೈನಾನ್ಷಿಯಲ್ ಇನ್ಕ್ಲೂಷನ್ ಲಿಮಿಟೆಡ್ನಲ್ಲಿ ಖಾಸಗಿ ಸಂಸ್ಥೆಯಲ್ಲಿ ಖಾಲಿಯಿರುವ 20 ಕಸ್ಟಮರ್ ರಿಲೇಷನ್ಶಿಪ್ ಹುದ್ದೆಗಳಿಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಈ ನೇರ ಸಂದರ್ಶನದಲ್ಲಿ ಪಿಯುಸಿ ಮತ್ತು ಯಾವುದೇ ಪದವಿ ಪಡೆದ ಪುರುಷರು ಹಾಗೂ ಮಹಿಳೆಯರು ಭಾಗವಹಿಸಬಹುದು. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಕಡ್ಡಾಯವಾಗಿ ದ್ವಿಚಕ್ರ ವಾಹನ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್ ಪ್ರತಿ ಹಾಗೂ ಸ್ವ-ವಿವರ ಪ್ರತಿಯೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ: 7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Leave a comment