ದಾವಣಗೆರೆ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಜೆ.ಸಿ.ಓ ಶ್ರೀಣಿವರೆಗಿನ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಂದನೇ ತರಗತಿಯಿಂದ ಅಂತಿಮ ಪದವಿ,ಡಿಪ್ಲೋಮ ವರೆಗೆ ವ್ಯಾಸಂಗ ಮಾಡುತ್ತಿರುವವರು ಅಕ್ಟೋಬರ್ 31 ರೊಳಗಾಗಿ ಮತ್ತು ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ನವಂಬರ್ 30 ರೊಳಗಾಗಿ ಶಿಷ್ಯವೇತನಕ್ಕಾಗಿ ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಿಂದ ಪಡೆದು ಯಾವ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವರೋ ಆ ಜಿಲ್ಲೆಗೆ ಸಂಬಂಧಿತ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂ.ಸಂ: 08182-220925 ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Leave a comment