Home ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ
Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

Share
Share

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ ತೆರೆಬಿದ್ದಿದ್ದು, ಬಿಡುಗಡೆಯಾಗಿರುವ ಪಟ್ಟಿಯ ವಿವರಗಳು ಇಲ್ಲಿವೆ.  ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಇಂದು ಸಂಜೆ ರಾಜಭವನದ ಗಾಜಿನ ಮನೆಯಲ್ಲಿ ಅದ್ಧೂರಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇದಕ್ಕಾಗಿ ರಾಜಭವನದಲ್ಲಿ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 3, 2026ರಂದು ಅಧಿಕಾರ ವಹಿಸಿಕೊಂಡ ಎರಡು ತಿಂಗಳ ಬಳಿಕ ಈ ಬಹುನಿರೀಕ್ಷಿತ ಸಂಪುಟ ವಿಸ್ತರಣೆ ನಡೆಯುತ್ತಿದೆ. ಡಿಕೆಶಿ ಸಂಪುಟ ಸೇರುವ ಅದೃಷ್ಟಶಾಲಿಗಳು ಯಾರು ಎಂಬ ಲೆಕ್ಕಾಚಾರಗಳಿಗೆ ಇಂದು ಸಂಜೆ ಅಧಿಕೃತವಾಗಿ ತೆರೆಬೀಳಲಿದೆ. ಕಳೆದ ಎರಡು ತಿಂಗಳಿಂದ ನಡೆದಿದ್ದ ಬಿರುಸಿನ ರಾಜಕೀಯ ಲೆಕ್ಕಾಚಾರ, ಲಾಬಿ ಹಾಗೂ ಸುದೀರ್ಘ ಕಸರತ್ತುಗಳ ಬಳಿಕ ಹೈಕಮಾಂಡ್ ಅಂತಿಮ ಪಟ್ಟಿಗೆ ಮುದ್ರೆ ಒತ್ತಿದೆ.

ಹೈಕಮಾಂಡ್ ಸಭೆಯಲ್ಲಿ ಅಂತಿಮಗೊಂಡ ಪಟ್ಟಿ

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹಿರಿಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ನೂತನ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಖಾಲಿಯಿರುವ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, ಜಾತಿ, ಧರ್ಮ, ಪ್ರಾದೇಶಿಕ ಅಸಮತೋಲನ ನಿವಾರಣೆ ಹಾಗೂ ಸಾಮಾಜಿಕ ನ್ಯಾಯದ ಸಮೀಕರಣಗಳನ್ನು ಎಚ್ಚರಿಕೆಯಿಂದ ಪರಿಗಣಿಸಿ ಪಟ್ಟಿ ಸಿದ್ಧಪಡಿಸಲಾಗಿದೆ. ವಿಶೇಷವೆಂದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿದ್ದ ಆರು ಮಂದಿ ಹಿರಿಯ ನಾಯಕರಿಗೆ ಮರಳಿ ಅವಕಾಶ ಕಲ್ಪಿಸಲಾಗಿದೆ.

ಸಂಪುಟ ಸೇರಲಿರುವ 20 ನೂತನ ಸಚಿವರು

  1. ಪಿ.ಎಂ. ನರೇಂದ್ರಸ್ವಾಮಿ
  2. ಶಿವರಾಜ್ ತಂಗಡಗಿ
  3. ರುದ್ರಪ್ಪ ಲಮಾಣಿ
  4. ಕೆ.ಎಸ್. ಬಸವಂತಪ್ಪ
  5. ಬಿ. ನಾಗೇಂದ್ರ
  6. ಟಿ. ರಘುಮೂರ್ತಿ
  7. ಜಮೀರ್ ಅಹಮದ್ ಖಾನ್
  8. ರಿಜ್ವಾನ್ ಅರ್ಷದ್
  9. ಸಂತೋಷ್ ಲಾಡ್
  10. ಮಧು ಬಂಗಾರಪ್ಪ
  11. ಸಿ. ಪುಟ್ಟರಂಗಶೆಟ್ಟಿ
  12. ಎಸ್.ಎಸ್‌,ಮಲ್ಲಿಕಾರ್ಜುನ
  13. ಡಾ. ಅಜಯ್ ಸಿಂಗ್
  14. ಎನ್. ಚಲುವರಾಯಸ್ವಾಮಿ
  15. ಕೆ.ಎಂ. ಶಿವಲಿಂಗೇಗೌಡ
  16. ಎಚ್.ಸಿ. ಬಾಲಕೃಷ್ಣ
  17. ಗಾಯತ್ರಿ ಶಾಂತೇಗೌಡ
  18. ಬಸವರಾಜ ರಾಯರೆಡ್ಡಿ
  19. ವಿಜಯಾನಂದ ಕಾಶಪ್ಪನವರ್
  20. ಲಕ್ಷ್ಮಣ ಸವದಿ

HARAPANAHALLI

ಸಚಿವರ ಪಟ್ಟಿ ಅಂತಿಮಗೊಂಡಿದ್ದರೂ, ಯಾರು ಯಾವ ಖಾತೆ ನಿಭಾಯಿಸಲಿದ್ದಾರೆ ಎಂಬ ಕುತೂಹಲ ಮಾತ್ರ ಇನ್ನೂ ಹಾಗೇ ಉಳಿದಿದೆ. ಇಂದು ಸಂಜೆ 4 ಗಂಟೆಗೆ ನಡೆಯಲಿರುವ ಸಮಾರಂಭದ ಬಳಿಕ ಖಾತೆ ಹಂಚಿಕೆಯ ಚಿತ್ರಣವೂ ಸ್ಪಷ್ಟವಾಗುವ ನಿರೀಕ್ಷೆಯಿದೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.