Home ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು
Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

Share
Share

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಮತ್ತು ಮೆದುಳಿನ ಬೆಳವಣಿಗೆಗೆ ತಾಯಿಯ ಎದೆಹಾಲು ಅತ್ಯಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಆಶ್ರಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಸ್ತನ್ಯಪಾನ ಸಪ್ತಾಹಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ತಾಯಿಯ ಎದೆಹಾಲಿನಲ್ಲಿರುವ ಪ್ರೋಟೀನ್ ಮಗುವಿನ ಬುದ್ಧಿಮಟ್ಟವನ್ನು ಚುರುಕುಗೊಳಿಸುವುದಲ್ಲದೆ, ಭವಿಷ್ಯದಲ್ಲಿ ಬರುವ ದೀರ್ಘಕಾಲದ ಕಾಯಿಲೆಗಳನ್ನು ತಡೆಗಟ್ಟುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಇದು ತಾಯಿ ಮತ್ತು ಮಗುವಿನ ನಡುವಿನ ಭಾವನಾತ್ಮಕ ಬಂಧವನ್ನು ವೃದ್ಧಿಸುತ್ತದೆ. ನಿಯಮಿತವಾಗಿ ಸ್ತನ್ಯಪಾನ ಮಾಡಿಸುವುದರಿಂದ ತಾಯಿಗೂ ಸಹ ಸ್ತನ ಕ್ಯಾನ್ಸರ್‌ನಿಂದ ರಕ್ಷಣೆ ಸಿಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಜಂಬಯ್ಯ ಅವರು ಮಾತನಾಡಿ, ಸುಸ್ಥಿರ ಜೀವನದ ಭದ್ರ ಅಡಿಪಾಯಕ್ಕಾಗಿ ಸ್ತನ್ಯಪಾನ ಪರಿಣಾಮಕಾರಿ ವಿಧಾನಗಳನ್ನು ಸದೃಢಗೊಳಿಸೋಣ ಎಂಬುದು ಈ ವರ್ಷದ ಆಚರಣೆಯ ಮುಖ್ಯ ಘೋಷವಾಕ್ಯದೊಂದಿಗೆ ಈ ದಿನ ವಿಶ್ವ ಸ್ತನ್ಯಪಾನ ದಿನ ಆಚರಿಸಲಾಗುತ್ತಿದೆ. ಪ್ರತಿ ವರ್ಷ ಆಗಸ್ಟ್ 1 ರಿಂದ 7 ರವರೆಗೆ ಜಾಗತಿಕ ಮಟ್ಟದಲ್ಲಿ ಸ್ತನ್ಯಪಾನ ಸಪ್ತಾಹವನ್ನು ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿವಿಧ ಆರೋಗ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಹೆರಿಗೆಯಾದ ತಕ್ಷಣ ತಾಯಿಯ ಸ್ತನದಿಂದ ಬರುವ ಮೊದಲ ಹಳದಿ ಬಣ್ಣದ ಹಾಲು (ಕೊಲೋಸ್ಟ್ರೋಮ್) ಮಗುವಿಗೆ ಸಂಜೀವಿನಿಯಂತೆ ಕೆಲಸ ಮಾಡುತ್ತದೆ. ಇದು ಮಗುವಿನ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಮಗು ಜನಿಸಿದ ಒಂದು ಗಂಟೆಯೊಳಗೆ ಕಡ್ಡಾಯವಾಗಿ ಎದೆಹಾಲನ್ನು ನೀಡಬೇಕು. ಮೊದಲ ಆರು ತಿಂಗಳವರೆಗೆ ಮಗುವಿಗೆ ಎದೆಹಾಲನ್ನು ಹೊರತುಪಡಿಸಿ ಬೇರೆ ಯಾವುದೇ ನೀರು ಅಥವಾ ಆಹಾರವನ್ನು ನೀಡಬಾರದು. ಆರು ತಿಂಗಳ ನಂತರ ಸೂಕ್ತವಾದ ಪೂರಕ ಪೌಷ್ಟಿಕ ಆಹಾರದೊಂದಿಗೆ ಎರಡು ವರ್ಷದವರೆಗೆ ಎದೆಹಾಲು ನೀಡುವುದನ್ನು ಮುಂದುವರಿಸಬೇಕು.

ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಭಾಸ್ಕರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ರಾಧಿಕಾ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸತೀಶ್ ಚಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖ ನಾಯ್ಕ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡಮನಿ, ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮನಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ. ವಿನೋದ್ ಹಾಗೂ ತಾಯಂದಿರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಶಿಕ್ಷಣ

ಬಿ.ಐ.ಇ.ಟಿ. ಯಲ್ಲಿ ನೈಲಿಟ್‌ನ 90 ಗಂಟೆಗಳ ‘ಚಿಪ್‌ಕ್ರಾಫ್ಟ್’ ಸೆಮಿಕಂಡಕ್ಟರ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ದಾವಣಗೆರೆ : ಬಾಪೂಜಿ ಇಂಜಿನಿಯರಿಂಗ್  ಮತ್ತು ತಾಂತ್ರಿಕ ಮಹಾವಿದ್ಯಾಲಯ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Homeಶಿಕ್ಷಣ

ವಿದ್ಯಾರ್ಥಿ ದೆಸೆಯಲ್ಲೇ ದೊಡ್ಡಮಟ್ಟದ ಸಾಧನೆಯ ಗುರಿ ಇರಲಿ

ಹರಪನಹಳ್ಳಿ: ಶಿಕ್ಷಣ ಪಡೆಯುವಾಗಲೇ ವಿದ್ಯಾರ್ಥಿಗಳು ದೊಡ್ಡಮಟ್ಟದ ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಪಿ. ಮಹಾಬಲೇಶ್ವರಗೌಡ್ರು ಕಿವಿಮಾತು ಹೇಳಿದರು. ನಗರದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಎಚ್.ಪಿ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2026 -27ನೇ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.