Home ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

Share
Share

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಮಂಗಳವಾರ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಿದರು.

ಜನ್ಮದಿನದ ವಿಶೇಷವಾಗಿ ಬೆಳಿಗ್ಗೆ ಸ್ಥಳೀಯ ಆಸ್ಪತ್ರೆಗೆ ತೆರಳಿದ ಅಭಿಮಾನಿಗಳು, ಅಲ್ಲಿನ ಒಳರೋಗಿಗಳಿಗೆ ಹಣ್ಣು ಹಾಗೂ ಬ್ರೆಡ್ ವಿತರಿಸಿ ಸಾಂತ್ವನ ಹೇಳಿದರು. ಅರ್ಥಪೂರ್ಣ ಮತ್ತು ಸಾಮಾಜಿಕ ಕಾಳಜಿಯ ಕಾರ್ಯಕ್ರಮದ ಮೂಲಕ ನೆಚ್ಚಿನ ನಾಯಕನ ಹುಟ್ಟುಹಬ್ಬಕ್ಕೆ ಶುಭಕೋರಿದರು.

ಮನೆಯಲ್ಲಿ ಹರಿದುಬಂದ ಶುಭಾಶಯಗಳ ಹೊಳೆ

ಜನ್ಮದಿನದ ಅಂಗವಾಗಿ ಮನೆಯಲ್ಲಿದ್ದ ಶಶಿಧರ ಪೂಜಾರ ಅವರನ್ನು ಭೇಟಿಯಾದ ನೂರಾರು ನಾಯಕರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಸಾವಿರಾರು ಅಭಿಮಾನಿಗಳು ಶುಭ ಹಾರೈಸಿದರು. ಅಭಿಮಾನಿಗಳು ಬೃಹತ್ ಕೇಕ್ ತಂದು ಶಶಿಧರ ಪೂಜಾರ ಅವರಿಂದ ಕತ್ತರಿಸಿ, ಪರಸ್ಪರ ಸಿಹಿ ಹಂಚಿ ಖುಷಿ ಹಂಚಿಕೊಂಡರು.

ಕಾರ್ಮಿಕ ಇಲಾಖೆ ನಿಗಮ ಮಂಡಳಿಯ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದಾರೆ. ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಶಶಿಧರ ಪೂಜಾರ ಅವರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸ್ಥಾನಮಾನ, ಅಧಿಕಾರಗಳು ದೊರೆಯಲಿ ಎಂದು ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಮುಖಂಡರು ಆಶಿಸಿದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.